ಹಿರಿಯ ಕಾಂಗ್ರೆಸ್​ ನಾಯಕ, ಮಾಜಿ ಶಾಸಕ ವಸಂತ್ ಬಂಗೇರ ನಿಧನ

Vasanth Bangera
Published on

ಬೆಂಗಳೂರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಭಾವಿ ಕಾಂಗ್ರೆಸ್​ ನಾಯಕ, ಐದು ಬಾರಿ ಶಾಸಕರಾಗಿ ಚುನಾಯಿತರಾಗಿದ್ದ ವಸಂತ್​ ಬಂಗೇರ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ. ಮೃತರಿಗೆ 79 ವರ್ಷ ವಯಸ್ಸಾಗಿತ್ತು ಎಂದು ತಿಳಿದು ಬಂದಿದೆ.

ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ವಸಂತ್​ ಕುಮಾರ್​ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೇ 09ರಂದು ಬೆಳ್ತಂಗಡಿಯಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ಬಿಜೆಪಿ, ಜನತಾದಳ ಹಾಗೂ ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದು ವಸಂತ್​ ಅವರು ಶಾಸಕರಾಗಿದ್ದರು. 1983 ಮತ್ತು 1985ರಲ್ಲಿ ಬಿಜೆಪಿಯಿಂದ, 1994ರಲ್ಲಿ ಜನತಾದಳದಿಂದ, 2008 ಮತ್ತು 2013ರಲ್ಲಿ ಕಾಂಗ್ರೆಸ್​​ನಿಂದ ಸ್ಪರ್ಧಿಸಿ ಗೆದ್ದಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net