ಹಿರಿಯ ಪತ್ರಕರ್ತ, ಲೇಖಕ ಜಿ.ಎನ್. ರಂಗನಾಥ ರಾವ್​ ಇನ್ನಿಲ್ಲ

GN Ranganatha Rao
Published on

ಬೆಂಗಳೂರು: ಹಿರಿಯ ಪತ್ರಕರ್ತ, ಲೇಖಕ, ಅನುವಾದಕ ಜಿ.ಎನ್. ರಂಗನಾಥ ರಾವ್ ಸೋಮವಾರ ಬೆಳಗ್ಗೆ ವಿಧಿವಶರಾಗಿದ್ದಾರೆ. ಮೃತರಿಗೆ 81 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ದಿನಗಳಿಂದ ತೀವ್ರ ಅನಾರೊಗ್ಯದಿಂದ ಬಳಲುತ್ತಿದ್ದ ಅವರು ಬಸವನಗುಡಿಯ ಬಿಎಂಎಸ್​ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

1942ರಲ್ಲಿ ಹಾರೋಹಳ್ಳಿಯಲ್ಲಿ ಜನಿಸಿದ ಅವರು, ಹೊಸಕೋಟೆ ಹಾಗೂ ಬೆಂಗಳೂರು ನಗರಗಳಲ್ಲಿ ವಿದ್ಯಾಭ್ಯಾಸ ಮಾಡಿದರು. 1962ರಲ್ಲಿ ಸಂಯುಕ್ತ ಕರ್ನಾಟಕ ಬೆಂಗಳೂರು ಆವೃತ್ತಿಯಲ್ಲಿ ಉಪಸಂಪಾದಕರಾಗಿ ತಮ್ಮ ವೃತ್ತಿ ಜೀವನ ಆರಂಭಿಸಿದ ಜಿ.ಎನ್. ರಂಗನಾಥ ರಾವ್ ಪ್ರಜಾವಾಣಿ ಸೇರಿದಂತೆ ಅನೇಕ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿ ಕಾರ್ಯನಿರ್ವಾಹಕ ಸಂಪಾದಕ ಹುದ್ದೆಗೇರಿ ನಿವೃತ್ತರಾದರು.

ಹಿರಿಯ ಪತ್ರಕರ್ತ ಜಿ.ಎನ್. ರಂಗನಾಥ ರಾವ್​ ಅವರ ಸಾವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್​ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಅವರ ಅಂತ್ಯೆಕ್ರಿಯೆಯನ್ನು ಕುಟುಂಬಸ್ಥರು ಚಾಮರಾಜಪೇಟೆ ರುದ್ರಭೂಮಿಯಲ್ಲಿ ನೆರವೇರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net