

ಬೆಂಗಳೂರು:
ಸುದ್ದಿ ಮನೆಯಲ್ಲಿ ಸುಧೀರ್ಘ ಅವಧಿಗೆ ಪತ್ರಕರ್ತರಾಗಿ ಸೇವೆ ಸಲ್ಲಿಸಿ ಅಗಲಿದ ಸಿ.ಆರ್.ಕೃಷ್ಣರಾವ್, ಕೆ.ಎಸ್.ಸಚ್ಚಿದಾನಂದ ಮೂರ್ತಿ, ಜಿ.ಎನ್.ರಂಗನಾಥ ರಾವ್, ಪಿ.ಎಂ.ಮಣ್ಣೂರ, ಕೆ.ಪ್ರಹ್ಲಾದರಾವ್ ಅವರುಗಳಿಗೆ ಗೌರವ ನುಡಿ ನಮನ ಕಾರ್ಯಕ್ರಮವನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಹಮ್ಮಿಕೊಂಡಿದೆ.
ನ.3 ಂದು ಬೆಳಿಗ್ಗೆ 11 ಗಂಟೆಗೆ ಕೆಯುಡಬ್ಲ್ಯೂಜೆ ಸಭಾಂಗಣ, ಕಂದಾಯ ಭವನ, 3ನೇ ಮಹಡಿ, ಕೆ.ಜಿ.ರೋಡ್, ಬೆಂಗಳೂರು. ಇಲ್ಲಿ ಗೌರವ ಸ್ಮರಣೆ ಕಾರ್ಯಕ್ರಮ ನಡೆಯಲಿದೆ.