ಆರ್‌ಎಸ್‌ಎಸ್ ಹಿರಿಯ ಮುಖಂಡ ಗೋಪಾಲ್ ಚೆಟ್ಟಿಯಾರ್ ನಿಧನ

New Project
Published on

ಬೆಂಗಳೂರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಮುಖಂಡ ಗೋಪಾಲ್ ಚೆಟ್ಟಿಯಾರ್ (78) ಮಂಗಳವಾರ ಬೆಳಗ್ಗೆ 2.45ಕ್ಕೆ ವಿಧಿವಶರಾಗಿದ್ದಾರೆ.

ದಕ್ಷಿಣ ಮಧ್ಯ ಕ್ಷೇತ್ರೀಯ ಸೇವಾ ಪ್ರಮುಖರಾಗಿ, ಕರ್ನಾಟಕ ದಕ್ಷಿಣ ಪ್ರಾಂತ ಸೇವಾ ಪ್ರಮುಖರಾಗಿ, ಮಂಗಳೂರು ವಿಭಾಗ ಸಂಘಚಾಲಕರಾಗಿ ಕಾರ್ಯನಿರ್ವಹಿಸಿದ್ದ ಗೋಪಾಲ್ ಚೆಟ್ಟಿಯಾರ್ 1946 ಅಗಸ್ಟ್ 8ರಂದು ಕೇರಳದ ಕಾಸರಗೋಡು ಜಿಲ್ಲೆಯ ಪೆರ್ಲದಲ್ಲಿ ಜನಿಸಿದ್ದರು. ವಿದ್ಯಾರ್ಥಿ ದೆಸೆಯಿಂದಲೇ ಸಂಘದ ಸ್ವಯಂಸೇವಕರಾಗಿ ತೊಡಗಿಸಿಕೊಂಡಿದ್ದರು. ಶಿಸ್ತುಬದ್ಧ ಜೀವನಶೈಲಿ, ಸೇವಾಭಾವ ಜಾಗರಣ, ಸಾಮಾಜಿಕ ಸಮರಸತೆಯ ಮೂಲಕ ಕಾರ್ಯಕರ್ತರಿಗೆ ಮಾದರಿಯಾಗಿದ್ದರು.

ಆರ್‌ಎಸ್‌ಎಸ್ ಸಂತಾಪ : ಗೋಪಾಲ್ ಚೆಟ್ಟಿಯಾರ್ ಅವರ ನಿಧನಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ, ಕ್ಷೇತ್ರೀಯ ಸಂಘಚಾಲಕ ವಿ. ನಾಗರಾಜ, ಕ್ಷೇತ್ರೀಯ ಕಾರ್ಯವಾಹ ನಾ. ತಿಪ್ಪೇಸ್ವಾಮಿ, ಭಾರತೀಯ ಶಿಕ್ಷಣ ಮಂಡಲದ ಅಖಿಲ ಭಾರತೀಯ ಸಂಘಟನಾ ಕಾರ್ಯದರ್ಶಿ ಶಂಕರಾನಂದ, ಪ್ರಜ್ಞಾ ಪ್ರವಾಹದ ಅಖಿಲ ಭಾರತೀಯ ಸಂಯೋಜಕ ನಂದಕುಮಾರ್, ಡಾ. ರಾಮ್ ಮಾಧವ್ ಸಂತಾಪ ಸೂಚಿಸಿದ್ದಾರೆ.

ಗೋಪಾಲ ಚೆಟ್ಟಿಯಾರರ ನಿಧನದ ಸುದ್ದಿ ಅತೀವ ದುಃಖಕರವಾಗಿದ್ದು, ಅವರ ಕುಟುಂಬಕ್ಕೆ ಹಾಗೂ ಅಭಿಮಾನಿಗಳಿಗೆ ಭಗವಂತ ದುಃಖವನ್ನು ತಡೆದುಕೊಳ್ಳುವ ಶಕ್ತಿ ನೀಡಲಿ ಹಾಗೂ ಚಿಟ್ಟಿಯಾರ್ ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ದತ್ತಾತ್ರೇಯ ಹೊಸಬಾಳೆ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net