ಹಿರಿಯ RSS ಮುಖಂಡ, ಮಾಜಿ ಪರಿಷತ್‌ ಸದಸ್ಯ ಪ್ರೊ.ಕೃ.ನರಹರಿ ವಿಧಿವಶ

Untitled design - 2025-10-08T093326.075
Published on

ಬೆಂಗಳೂರು: ಹಿರಿಯ RSS ಮುಖಂಡ, ಮಾಜಿ ಪರಿಷತ್‌ ಸದಸ್ಯ ಪ್ರೊ.ಕೃ.ನರಹರಿ (93) ಬುಧವಾರ ಬೆಳಗ್ಗೆ 4.30ಕ್ಕೆ ವಯೋಸಹಜ ಕಾಯಿಲೆಯಿಂದ ಬೆಂಗಳೂರಿನಲ್ಲಿರುವ ಸ್ವಗೃಹದಲ್ಲಿ ವಿಧಿವಶರಾದರು.

ಈ ಹಿಂದೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಕಾರ್ಯವಾಹರಾಗಿ, ರಾಷ್ಟ್ರೀಯ ಶೈಕ್ಷಿಕ ಮಹಾಸಂಘದ ಅಖಿಲ ಭಾರತೀಯ ಅಧ್ಯಕ್ಷರಾಗಿ, ವಿಧಾನ ಪರಿಷತ್ ಸದಸ್ಯರಾಗಿ ಮತ್ತು ದಿ ಮಿಥಿಕ್ ಸೊಸೈಟಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

ತುರ್ತು ಪರಿಸ್ಥಿತಿಯ ವಿರುದ್ಧ ಹೋರಾಟದಲ್ಲಿ ಮಂಚೂಣಿದ್ದ .ಕೃ.ನರಹರಿ ಜೈಲುವಾಸ ಕೂಡ ಅನುಭವಿಸಿದ್ದರು. ಅವರ ನಿಧನಕ್ಕೆ ಸಂಘದ ಪ್ರಮುಖರು ಸೇರಿ ಬಿಜೆಪಿ ನಾಯಕರು ಕಂಬನಿ ಮಿಡಿದಿದ್ದಾರೆ. ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net