23ರಂದು ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಮಾಗಮ

sahyadri science collage pro.n.rajeshwari
ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷೆ, ಕಾಲೇಜಿನ ಪ್ರಾಚಾರ್ಯೆ ಪ್ರೊ. ಎನ್.ರಾಜೇಶ್ವರಿ
Published on

ಶಿವಮೊಗ್ಗ: ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಹಿರಿಯ ವಿದ್ಯಾರ್ಥಿಗಳ ಸಮಾಗಮ-2024 ನಮ್ಮ ಸಹ್ಯಾದ್ರಿ ನಮ್ಮ ಹೆಮ್ಮೆ ಕಾರ್ಯಕ್ರಮವನ್ನು ನ.23ರಂದು ಕಾಲೇಜಿನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷೆ, ಕಾಲೇಜಿನ ಪ್ರಾಚಾರ್ಯೆ ಪ್ರೊ. ಎನ್.ರಾಜೇಶ್ವರಿ ಹೇಳಿದರು.

ಬೆಳಗ್ಗೆ 11ಕ್ಕೆ ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶರತ್ ಅನಂತ್‌ಮೂರ್ತಿ ಕಾರ್ಯಕ್ರಮ ಉದ್ಘಾಟಿಸುವರು. ಸಂಘದ ಗೌರವಾಧ್ಯಕ್ಷರೂ ಆದ ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಎಚ್.ಶಂಕರಮೂರ್ತಿ, ಕುವೆಂಪು ವಿವಿ ಕುಲಸಚಿವರಾದ ಎ.ಎಲ್.ಮಂಜುನಾಥ, ಪ್ರೊ. ಎಸ್.ಎನ್.ಗೋಪಿನಾಥ್ ಮುಖ್ಯ ಅತಿಥಿಯಾಗಿರುವರು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸಂಘದ ಮಾಜಿ ಅಧ್ಯಕ್ಷೆ ಡಾ. ಎಚ್.ಎಂ.ವಾಗ್ದೇವಿ, ಉಪಾಧ್ಯಕ್ಷ ಕೆ.ಬಿ.ಅಶೋಕನಾಯ್ಕ, ಸಹ ಕಾರ್ಯದರ್ಶಿ ಉಮೇಶ ಶಾಸ್ತ್ರಿ ಮತ್ತಿತರರು ಉಪಸ್ಥಿತರಿರುವರು. ಹಳೇ ವಿದ್ಯಾರ್ಥಿಗಳ ಸಮಾಗಮಕ್ಕೆ ಆನ್‌ಲೈನ್ ಮೂಲಕ ಲಿಂಕ್ ಸಿದ್ಧಪಡಿಸಿದ್ದು ಈಗಾಗಲೇ 2,600ಕ್ಕೂ ಅಧಿಕ ಹಳೇ ವಿದ್ಯಾರ್ಥಿಗಳು ಸೇರ್ಪಡೆ ಆಗಿದ್ದಾರೆ. 500ಕ್ಕೂ ಅಧಿಕ ಮಂದಿ ನೋಂದಣಿ ಮಾಡಿಕೊಂಡಿದ್ದಾರೆ. ಇಡೀ ದಿನ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಅಂದು ಬೆಳಗ್ಗೆ 9.30ರಿಂದ 11ರವರೆಗೆ ಸ್ಥಳದಲ್ಲಿ ನೋಂದಣಿಗೆ ಅವಕಾಶ ನೀಡಲಾಗುವುದು. ತದನಂತರ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಬಳಿಕ ಹಳೇ ವಿದ್ಯಾರ್ಥಿಗಳೊಂದಿಗೆ ಚರ್ಚೆ, ಸಮಾಲೋಚನೆ, ಕಲಿಕೆ ವೇಳೆ ಆದ ಅನುಭವಗಳನ್ನು ಹಂಚಿಕೊಳ್ಳುವುದಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದರು.

ನಮ್ಮ ಕಾಲೇಜಿನಲ್ಲಿ ಓದಿದವವರು ಉದ್ಯೋಗದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಭಾರತರತ್ನ ಪುರಸ್ಕೃತ ಸಿಎನ್‌ಆರ್ ರಾವ್, ಕೆ.ವಿ.ಸುಬ್ಬಣ್ಣ, ನ್ಯೂರಾಲಜಿಸ್ಟ್ ಡಾ. ಶ್ರೀಧರ್, ಚಿತ್ರ ಸಾಹಿತಿ ಕವಿರಾಜ್ ಸೇರಿದಂತೆ ಹಲವರು ಉನ್ನತ ಹುದ್ದೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಸ್ವಂತ ಉದ್ಯಮ ಆರಂಭಿಸಿದ್ದು ಅವರೆಲ್ಲರ ಒತ್ತಾಸೆಯಂತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಕಾರ್ಯದರ್ಶಿ ಡಾ. ನಾಗರಾಜ್ ಪರಿಸರ, ಸಹ ಕಾರ್ಯದರ್ಶಿ ಉಮೇಶ್ ಶಾಸ್ತ್ರಿ, ನಿರ್ದೇಶಕರಾದ ಡಾ. ಕೆ.ಪಿ.ಲತಾ, ನಾಗರಾಜ್ ನೇರಿಗೆ, ಸತ್ಯಚರಣ್, ಶ್ರೀಧರ್ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net