ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣ ತಪ್ಪಿಸಲು ಸರ್ಕಾರದಿಂದ ಪ್ರಕಟವಾಗಲಿದೆ ಎಸ್‌ಇಪಿ

cyber crime
Published on

ಬೆಂಗಳೂರು ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪರೀಕ್ಷಾ ಒತ್ತಡದಿಂದ ಹಾಗೂ ಇತರೆ ಗಂಭೀರ ಪ್ರಕರಣಗಳಿಂದ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ತಡೆಗಟ್ಟುವುದಕ್ಕಾಗಿ ಮಾರ್ಗಸೂಚಿಯನ್ನು ಪ್ರಕಟಿಸಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ತಿಳಿಸಿದರು.

ಉನ್ನತ ಶಿಕ್ಷಣ ಪರಿಷತ್ತಿನಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ ಅವರು, ಕಳೆದ ವರ್ಷ ಪಿಇಎಸ್ ಕಾಲೇಜಿನಲ್ಲಿ ಪರೀಕ್ಷೆಯಲ್ಲಿ ನಕಲು ಮಾಡಿದ ಎಂಬ ಕಾರಣ ನೀಡಿದ್ದರಿಂದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದ. ಪ್ರಕರಣ ಸಂಬಂಧ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ. ಎಸ್.ಎಂ. ಜಯಕರ್ ನೇತೃತ್ವದ ಸಮಿತಿ ನೀಡಿರುವ ಶಿಾರಸಿನ ಆಧಾರದಲ್ಲಿ ಮಾರ್ಗಸೂಚಿ ಪ್ರಕಟಿಸಲಾಗುತ್ತದೆ ಎಂದು ಹೇಳಿದರು.

ಕೇವಲ ಪರೀಕ್ಷೆ ಒತ್ತಡ ಮಾತ್ರವಲ್ಲದೆ, ಆನ್‌ಲೈನ್ ಗೇಮ್‌ಗಳಿಂದ ಹಣ ಕಳೆದುಕೊಳ್ಳುವುದು, ಪ್ರೀತಿ-ಪ್ರೇಮದ ಸಮಯದಲ್ಲಿ ಕುಟುಂಬ ಸದಸ್ಯರಲ್ಲಿ ವಿಷಯ ತಿಳಿಸಲು ಹಿಂಜರಿದು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಕಂಡು ಬರುತ್ತಿವೆ. ಈ ಎಲ್ಲ ಕಾರಣದಿಂದ ಉನ್ನತ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳನ್ನು ಯಾವ ರೀತಿಯಲ್ಲಿ ಮನವರಿಕೆ ಮಾಡಿಕೊಡಬೇಕು ಮತ್ತು ಆತ್ಮಹತ್ಯೆ ಪ್ರಕರಣಗಳನ್ನು ತಪ್ಪಿಸಲು ಕೈಗೊಳ್ಳಬೇಕಾದ ಕ್ರಮಗಳನ್ನು ತಿಳಿಸಲಾಗುತ್ತದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net