'ಪಾರು’ ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ ನಿಧನ! Shridhar Nayak

Sridhar nayak
Published on

 ಬೆಂಗಳೂರು: (Shridhar Nayak ) ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಕಿರುತೆರೆ ಮತ್ತು ಚಲನಚಿತ್ರ ನಟ ಶ್ರೀಧರ್ ನಾಯಕ್ ಅವರು ಮೇ 26ರಂದು ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ 47 ವರ್ಷದ ಶ್ರೀಧರ್  ಅವರು ಚಿಕಿತ್ಸೆ ಫಲಕಾರಿ ಆಗದೆ ಕೊನೆಯುಸಿರು ಎಳೆದಿದ್ದಾರೆ. ಬೆಂಗಳೂರಿನ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಅವರ ಕಳೆಬರಹವನ್ನು ಇಡಲಾಗಿದೆ.

ಶ್ರೀಧರ್‘ಪಾರು’ ಮತ್ತು ‘ವಧು’ ಧಾರಾವಾಹಿಗಳಲ್ಲಿ ಪಾತ್ರಗಳು ಜನಪ್ರಿಯವಾಗಿದ್ದವು. ‘ಮ್ಯಾಕ್ಸ್’ ಚಿತ್ರದಲ್ಲೂ ಅವರು ನಟಿಸಿದ್ದರು. ಅವರ ಅಕಾಲಿಕ ನಿಧನವು ಅಭಿಮಾನಿಗಳಿಗೆ ಆಘಾತವನ್ನುಂಟು ಮಾಡಿದೆ.

ಇತ್ತೀಚೆಗೆ ಶ್ರೀಧರ್ ಅನಾರೋಗ್ಯ, ಆರ್ಥಿಕ ಪರಿಸ್ಥಿತಿ ಹದಗೆಟ್ಟಿತ್ತು. ಹೀಗಾಗಿ, ಅವರು ಸಹಾಯ ಕೋರಿದ್ದರು. ಅನೇಕರು ಹಣದ ಸಹಾಯ ಕೂಡ ಮಾಡಿದ್ದರು. ಆದರೆ, ಚಿಕಿತ್ಸೆ ಫಲಕಾರಿ ಆಗಲಿಲ್ಲ. ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net