ಮೂರ್ನಾಡುವಿನಲ್ಲಿ ಸೇವಾ ಪಾಕ್ಷಿಕ ಕಾರ್ಯಕ್ರಮ

29.,npk .2
ಮೂರ್ನಾಡು ಬಿಜೆಪಿ ಶಕ್ತಿ ಕೇಂದ್ರದಲ್ಲಿ , ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲ ವತಿಯಿಂದ ಸೇವಾ ಪಾಕ್ಷಿಕ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ರವಿ ಕಾಳಪ್ಪ, ರವಿ, ಕೆ.ಜಿ.ಬೋಪಯ್ಯ, ಅಪ್ಪಚ್ಚು ರಂಜನ್, ಅಶ್ವಿ ಸತೀಶ್, ಚೇತನ್ ಬಂಗೇರ ಇತರರಿದ್ದರು.
Published on

ನಾಪೋಕ್ಲು: ಮೂರ್ನಾಡು ಬಿಜೆಪಿ ಶಕ್ತಿ ಕೇಂದ್ರದಲ್ಲಿ ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲ ವತಿಯಿಂದ ಸೇವಾ ಪಾಕ್ಷಿಕ ಕಾರ್ಯಕ್ರಮ ಇತ್ತೀಚೆಗೆ ಆಯೋಜಿಸಲಾಗಿತ್ತು.

ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ಈ ವೇಳೆ ರಕ್ತದಾನ ಶಿಬಿರ, ಜನ ಸಂಘದ ಸ್ಥಾಪಕರಾದ ಶ್ರೀ ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮದಿನ ಆಚರಣೆ ಮತ್ತು ಮೂರ್ನಾಡು ಆಸ್ಪತ್ರೆ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮ ನೆರವೇರಿಸಲಾಯಿತು.

ಮೂರ್ನಾಡು ಶಕ್ತಿ ಕೇಂದ್ರದ ಅಧ್ಯಕ್ಷ ರವಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ, ಅಪ್ಪಚ್ಚು ರಂಜನ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಅಶ್ವಿ ಸತೀಶ್, ಯುವ ಮೋರ್ಚಾ ಅಧ್ಯಕ್ಷ ಚೇತನ್ ಬಂಗೇರ, ಮಹಿಳಾ ಮೋರ್ಚಾ ಅಧ್ಯಕ್ಷ ಕುಮುದಾ ಮತ್ತು ಬಿಜೆಪಿ ಕಾರ್ಯಕರ್ತರು ಶಕ್ತಿ ಕೇಂದ್ರದ ಪ್ರಮುಖ್ ಸಹ ಪ್ರಮುಖ್ ಮತ್ತು ಚುನಾಯಿತ ಪ್ರತಿನಿಧಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಸ್ವಾಗತಿಸಿ, ವಂದಿಸಿದರು.’

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net