ಸೇವಾ ಸಂಸ್ಥೆಗಳ ಕಾರ್ಯ ಸಮಾಜಕ್ಕೆ ಮಾರ್ಗಸೂಚಿ

innerwheel
ಸಾಗರದಲ್ಲಿ ಆಯೋಜಿಸಿದ್ದ ಇನ್ನರ್‌ವ್ಹೀಲ್ ಕ್ಲಬ್-318ರ ಜಿಲ್ಲಾ ಸಮ್ಮೇಳನದಲ್ಲಿ ಮೈತ್ರಿ ಪಾಟೀಲ್, ಶಬರಿ ಕಡಿದಾಳ್, ರಾಜೇಶ್ವರಿ ಮಹೇಶ್, ಶಶಿಕಲಾ, ಉಮಾ ಮಹೇಶ್, ರಜನಿ ಭಟ್ ಇತರರಿದ್ದರು.
Published on

ಸಾಗರ: ಮಹಿಳೆಯರು ಸಂಘಟಿತರಾದರೆ ಯಾವ ಸಾಧನೆಯನ್ನಾದರೂ ಮಾಡಬಹುದು ಎಂಬುದಕ್ಕೆ ಸಾಗರದಲ್ಲಿ ಇನ್ನರ್‌ವ್ಹೀಲ್ ಸಂಸ್ಥೆ ಉದಾಹರಣೆ. ಇವರ ಸಂಘಟಿತ ಚಿಂತನೆ ಮಾದರಿ ಎಂದು ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್ ಹೇಳಿದರು.

ಸಾಗರದ ಶ್ರಿ ರಾಘವೇಶ್ವರ ಸಭಾಭವನದಲ್ಲಿ ಇನ್ನರ್‌ವ್ಹೀಲ್ ಕ್ಲಬ್ ಆ್ ಸಾಗರ್ ಯೂನಿಕ್‌ನಿಂದ ಏರ್ಪಡಿಸಿದ್ದ ಇನ್ನರ್ ವ್ಹೀಲ್-318ರ ಜಿಲ್ಲಾ ಸಮ್ಮೇಳನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಇನ್ನರ್‌ವ್ಹೀಲ್ ಕ್ಲಬ್ ಅಂತಾರಾಷ್ಟ್ರೀಯ ಸಂಸ್ಥೆಯಾದರೂ ಭಾರತದಲ್ಲಿ ವ್ಯವಸ್ಥಿತವಾಗಿ ಕಟ್ಟಲಾಗಿದೆ ಎಂದರು.

ಕುಡಿಯುವ ನೀರಿನ ಘಟಕ, ಶಾಲೆಗಳಿಗೆ ಪಠ್ಯಪುಸ್ತಕ, ಆಟಿಕೆ ಸಾಮಗ್ರಿ, ಸಮವಸ, ಪೀಠೋಪಕರಣ, ಸ್ಟೀಲ್ ಬಾಟಲ್, ಹೆಣ್ಣು ಮಕ್ಕಳಿಗೆ ಸ್ಯಾನಿಟರಿ ಪ್ಯಾಡ್, ಬಾಣಂತಿಯರಿಗೆ ಪೌಷ್ಟಿಕ ಆಹಾರ ಇತ್ಯಾದಿ ಹತ್ತು ಹಲವಾರು ಸೇವಾ ಕಾರ್ಯಗಳನ್ನು ಮಾಡುತ್ತಿದೆ. ಈ ಸಂಸ್ಥೆ ಸಮಾಜಕ್ಕೆ ಮಾರ್ಗಸೂಚಿಯಾಗಿದೆ ಎಂದು ಅಭಿಪ್ರಾಯಪಟ್ಟರು.

ಹತ್ತು ಹಲವಾರು ಸೇವಾ ಕಾರ್ಯಗಳ ಮೂಲಕ ಮಹಿಳೆಯರ ಸಮಗ್ರ ಅಭಿವೃದ್ಧಿಗೆ ಸಂಸ್ಥೆ ಶ್ರಮಿಸುತ್ತಿದೆ. ಮಹಿಳೆಯರು ಯಾವುದರಲ್ಲೂ ಹಿಂದೆ ಬಿದ್ದಿಲ್ಲ. ಗ್ರಾಪಂನಿಂದ ಹಿಡಿದು ರಾಷ್ಟ್ರಪತಿ ಹುದ್ದೆವರೆಗೆ ಎಲ್ಲ ರೀತಿಯ ಹುದ್ದೆಗಳನ್ನು ನಿರ್ವಹಿಸುತ್ತಿದ್ದಾರೆ. ಇಂಥ ಸಾಧನೆಗಳಿಗೆ ಇನ್ನರ್ ವ್ಹೀಲ್ ಸಂಸ್ಥೆ ಪ್ರೇರಣೆ ನೀಡುತ್ತಿದೆ. ಮಹಿಳೆಯರನ್ನು ಸಂಘಟಿಸುವುದು ಸುಲಭದ ಕೆಲಸವಲ್ಲ. ಸಂಘಟನೆಗೆ ಶಕ್ತಿ ಇದೆ ಎಂಬುದನ್ನು ಅರಿತುಕೊಳ್ಳಬೇಕು. ಮನೆಯಲ್ಲಿ ತಾಯಂದಿರು ಮಕ್ಕಳಿಗೆ ಹೆಚ್ಚು ಸಮಯ ಕೊಡಬೇಕು. ಟಿವಿ, ಮೊಬೈಲ್‌ನಿಂದ ಮಕ್ಕಳನ್ನು ದೂರವಿಡಬೇಕು. ತಂದೆ ತಾಯಿಗೆ ಗೌರವ ಕೊಡುವ ಸಂಸ್ಕೃತಿಯನ್ನು ಮಕ್ಕಳಲ್ಲಿ ಬೆಳೆಸಬೇಕು ಎಂದು ಸಲಹೆ ನೀಡಿದರು.

ಇನ್ನರ್ ವ್ಹೀಲ್-318ರ ಜಿಲ್ಲಾಧ್ಯಕ್ಷೆ ಶಬರಿ ಕಡಿದಾಳ್ ಮಾತನಾಡಿ, ಕ್ಲಬ್‌ನ ವ್ಯಾಪ್ತಿಯಲ್ಲಿ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ ಜಿಲ್ಲೆಗಳಿವೆ. ಈ ಎಲ್ಲ ಜಿಲ್ಲೆಗಳಿಂದ ಸದಸ್ಯೆಯರು ಈ ಸಮ್ಮೇಳನಕ್ಕೆ ಆಗಮಿಸಿದ್ದಾರೆ. ಸಾಗರ ಸುತ್ತಮುತ್ತ ಅನೇಕ ಪ್ರೇಕ್ಷಣೀಯ ಸ್ಥಳಗಳಿವೆ. ಇಲ್ಲಿ ಸಮ್ಮೇಳನ ನಡೆಯುತ್ತಿರುವುದು ಖುಷಿಯ ಸಂಗತಿ ಎಂದರು.

ಸಂಗೀತ, ಛಾಯಾಚಿತ್ರ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಇನ್ನರ್‌ವ್ಹೀಲ್ ಕ್ಲಬ್ ಆ್ ಸಾಗರ್ ಯೂನಿಕ್ ಅಧ್ಯಕ್ಷೆ ರಾಜೇಶ್ವರಿ ಮಹೇಶ್ ಅಂಕದ, ಸಮ್ಮೇಳನ ಸಮಿತಿ ಅಧ್ಯಕ್ಷೆ ಶಶಿಕಲಾ ಅಶ್ವತ್ಥನಾರಾಯಣ, ಜಿಲ್ಲಾ ಕಾರ್ಯದರ್ಶಿ ಉಮಾ ಮಹೇಶ್, ಕ್ಲಬ್-318ರ ಜಿಲ್ಲಾ ಉಪಾಧ್ಯಕ್ಷೆ ರಜನಿ ಭಟ್, ಪ್ರಮುಖರಾದ ದೀಪಾ ಭಂಡಾರಿ, ವೈಶಾಲಿ ಕುಡವ, ಅನಿತಾ ಸುರೇಶ್, ಸಹನಾ ನಾಗರಾಜ್, ರೇಖಾ ಶಿವಕುಮಾರ್, ಪೂರ್ಣಿಮಾ ಗುರುಪ್ರಸಾದ್, ಸ್ನೇಹಲತಾ ವಿನಯ್, ಡಾ. ರಾಜನಂದಿನಿ ಕಾಗೋಡು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net