ಜು.15 ರಿಂದ ಅಧಿವೇಶನ; ರಾಜ್ಯಪಾಲರಿಗೆ ಶಿಫಾರಸು

hk PATIL
Published on

ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನವನ್ನು ಜು.15 ರಿಂದ ಜು.26 ರವರೆಗೆ ಕರೆಯಲು ರಾಜ್ಯಪಾಲರಿಗೆ ಸರ್ಕಾರ ಶಿಫಾರಸು ಮಾಡಿದೆ.

ಜೂ.20 ರಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ಅಧಿವೇಶನದ ದಿನಾಂಕ ಅಂತಿಮಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಧಿಕಾರ ನೀಡಲಾಗಿತ್ತು.

ಅದರಂತೆ, ಮುಖ್ಯಮಂತ್ರಿಗಳು ಅಧಿವೇಶನದ ದಿನಾಂಕವನ್ನು ಅಂತಿಮಗೊಳಿಸಿದ್ದಾರೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ.ಪಾಟೀಲ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net