

ಬೆಂಗಳೂರು: ಡಿಸೆಂಬರ್‌ನಲ್ಲಿ ಎರಡು ವಾರ ಚಳಿಗಾಲದ ಅಧಿವೇಶನ ನಡೆಸಲು ಗುರುವಾರ ನಡೆದ ಸಂಪುಟ ಸಭೆ ನಿರ್ಧರಿಸಿದೆ. ಅಧಿವೇಶನ ಯಾವಾಗ ನಡೆಸಬೇಕು ಎಂಬ ತೀರ್ಮಾನವನ್ನು ಕೈಗೊಳ್ಳಲು ಮುಖ್ಯಮಂತ್ರಿಯವರ ವಿವೇಚನೆಗೆ ಬಿಡಲು ಸಂಪುಟ ಸಭೆ ತೀರ್ಮಾನಿಸಿತು.
ಡಿಸೆಂಬರ್ 4ರಿಂದ 14ರವರೆಗೆ ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಬಗ್ಗೆಯೂ ಪ್ರಾಥಮಿಕ ಹಂತದ ಚರ್ಚೆ ಕೂಡ ನಡೆದಿದೆ ಎನ್ನಲಾಗಿದೆ.