ಬಡವರಿಗೆ ಮತ್ತೊಂದು ಕೊಡುಗೆ: 188 ಹೊಸ ಇಂದಿರಾ ಕ್ಯಾಂಟೀನ್ ಸ್ಥಾಪನೆ

Indira Canteen
Published on

ಬೆಂಗಳೂರು: ಬಡವರಿಗೆ ಕಡಿಮೆ ಖರ್ಚಿನಲ್ಲಿ ಆಹಾರ ಪೂರೈಸುವ ಉದ್ದೇಶದಿಂದ ಬಿಬಿಎಂಪಿ ಹೊರತುಪಡಿಸಿ ರಾಜ್ಯದ ಮಹಾನಗರ ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ 188 ಹೊಸ ಇಂದಿರಾ ಕ್ಯಾಂಟೀನ್ ಆರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

ಅಲ್ಲದೆ ಊಟದ ಮೆನು ಕೂಡ ಬದಲಾವಣೆ ಮಾಡಲಾಗಿದೆ. ಸ್ಥಳೀಯ ಆಹಾರ ಪದ್ಧತಿಗೆ ಅನುಗುಣವಾಗಿ ಆಹಾರ ಪೂರೈಸುವ ಹಾಗೂ ಹೆಚ್ಚು ಆಹಾರ ಪದಾರ್ಥಗಳನ್ನು ನೀಡಲು ನಿರ್ಧರಿಸಲಾಗಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಇಂದಿರಾ ಕ್ಯಾಂಟೀನ್ ಬಲಪಡಿಸುವುದಾಗಿ ಮುಖ್ಯಮಂತ್ರಿಯಾದಿಯಾಗಿ ಹಲವು ಸಚಿವರು ಹೇಳಿದ್ದರು. ಈಗ ಆ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದ್ದು, 188ಹೊಸ ಇಂದಿರಾ ಕ್ಯಾಂಟೀನ್ ಆರಂಭಿಸಲು ತೀರ್ಮಾನಿಸಲಾಗಿದೆ. ಅಲ್ಲದೆ, ಹಾಲಿ ಇರುವ 197 ಕ್ಯಾಂಟೀನ್‌ಗಳ ದುರಸ್ತಿಗಾಗಿ 21.29 ಕೋಟಿ ರೂ. ಬಿಡುಗಡೆ ಮಾಡಲು ನಿರ್ಣಯಿಸಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ದರದಲ್ಲಿ ಯಾವುದೇ ಬದಲಾವಣೆ ಇಲ್ಲ

ಈ ಕ್ಯಾಂಟೀನ್‌ಗಳಲ್ಲಿ ಇನ್ನು ಮುಂದೆ ಸ್ಥಳೀಯ ಆಹಾರ ಪದ್ಧತಿ ಆಧರಿಸಿ ಊಟ ನೀಡುವುದು ಹಾಗೂ ಹೆಚ್ಚು ಪದಾರ್ಥಗಳನ್ನು ನೀಡಿದರೂ ಕೂಡ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಒಂದು ಊಟಕ್ಕೆ 10 ರೂ. ಇರುತ್ತದೆ.

ಒಂದು ದಿನ ಉಪಹಾರ ಹಾಗೂ ಎರಡು ಊಟ ಸೇರಿ ಗ್ರಾಹಕರಿಂದ 25 ರೂ. ಪಡೆದರೆ 37 ರೂ.ಗಳನ್ನು ಸರ್ಕಾರ ಭರಿಸಲಿದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net