ಮತದಾನಕ್ಕೂ ಮುನ್ನವೇ ಕೇರಳದಲ್ಲಿ ಬಿಜೆಪಿಗೆ ಭಾರಿ ಹಿನ್ನಡೆ: ಕೋರ್ಟ್​ ಮೆಟ್ಟಿಲೇರಿದ ಅಭ್ಯರ್ಥಿಗಳು!

election-BJP
Published on

ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಮತದಾನಕ್ಕೂ ಮುನ್ನವೇ ಬಿಜೆಪಿಗೆ ಭಾರಿ ಹಿನ್ನಡೆಯಾಗಿದೆ. ಕೇರಳ ವಿಧಾನಸಭಾ ಕ್ಷೇತ್ರಗಳಲ್ಲಿ ಸಲ್ಲಿಕೆಯಾಗಿದ್ದು, ಎನ್​ಡಿಎ ಅಭ್ಯರ್ಥಿಗಳ ನಾಮಪತ್ರ ಚುನಾವಣಾ ಅಧಿಕಾರಿಗಳಿಂದ ತಿರಸ್ಕೃತಗೊಂಡಿದೆ.

ಥಲಸ್ಸೆರಿ ಕ್ಷೇತ್ರ ಬಿಜೆಪಿ ಅಭ್ಯರ್ಥಿಯ ನಾಮಪತ್ರ ಮತ್ತು ಕಣ್ಣೂರಿನ ಪಕ್ಷದ ಅಧ್ಯಕ್ಷ ಎನ್​ ಹರಿದಾಸ್​ ನಾಮಪತ್ರವನ್ನು ತಿರಸ್ಕರಿಸಲಾಗಿದೆ. ಅಭ್ಯರ್ಥಿಗಳು ಸಲ್ಲಿಸಿದ ನಾಮಪತ್ರದಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಸಹಿಯನ್ನು ಹೊಂದಿಲ್ಲ ಎಂಬ ಕಾರಣ ನೀಡಲಾಗಿದೆ.

ಗುರುವಾಯೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮತ್ತು ಮಹಿಳಾ ಮೊರ್ಚಾದ ರಾಜ್ಯಾಧ್ಯಕ್ಷೆ ನಿವೇದಿತಾ ಸುಬ್ರಮಣಿಯಂ ನಾಮಪತ್ರವೂ ಸಹ ಈ ಮೇಲಿನ ಕಾರಣ ನೀಡಿಯೇ ತಿರಸ್ಕರಿಸಲಾಗಿದೆ.

ಇದನ್ನು ಹೊರತುಪಡಿಸಿದರೆ, ಇಡುಕ್ಕಿಯ ದೇವಿಕುಲಂ ಕ್ಷೇತ್ರದಲ್ಲಿ ಎಐಎಡಿಎಂಕೆ ಅಭ್ಯರ್ಥಿ ಧನಲಕ್ಷ್ಮಿ ನಾಮಪತ್ರವನ್ನು ಅಪೂರ್ಣ ಎಂಬ ಕಾರಣ ನೀಡಿ ತಿರಸ್ಕರಿಸಲಾಗಿದೆ. ಇಲ್ಲಿ ಎಐಎಡಿಎಂಕೆ ಅಭ್ಯರ್ಥಿಗೆ ಬಿಜೆಪಿ ಬೆಂಬಲ ನೀಡಿತ್ತು.

ಏಪ್ರಿಲ್​ 6ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಲ್ಲಿಸಲಾಗಿದ್ದ ನಾಮಪತ್ರಗಳನ್ನು ಚುನಾವಣಾ ಅಧಿಕಾರಿಗಳು ತಿರಸ್ಕರಿಸದ ಕ್ರಮವನ್ನು ಪ್ರಶ್ನಿಸಿ ಭಾನುವಾರ ಕೇರಳ ಹೈಕೋರ್ಟ್​ ಮೆಟ್ಟಿಲೇರಿರುವ ಬಿಜೆಪಿ ಅಭ್ಯರ್ಥಿಗಳು ಚುನಾವಣಾ ಆಯೋಗದ ಪ್ರತಿಕ್ರಿಯೆಯನ್ನು ಕೇಳಿದೆ.

ನ್ಯಾಯಮೂರ್ತಿ ಎನ್.ನಾಗರೇಶ್ ಅವರು ಸೋಮವಾರ ಪ್ರತಿ-ಅಫಿಡವಿಟ್ ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದ್ದು, ಹೆಚ್ಚಿನ ವಿಚಾರಣೆಗೆ ಅರ್ಜಿಗಳನ್ನು ಮಧ್ಯಾಹ್ನ 12 ಗಂಟೆಗೆ ಮುಂದೂಡಿದರು. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net