ಕಣ್ಣಿನ ಪೊರೆ ತೆಗಿಸಲು ಬಂದು ದೃಷ್ಟಿ ಕಳೆದುಕೊಂಡ 7 ಜನರು!

Untitled design (53)
Published on

ಗುಜರಾತ್​: ಗುಜರಾತ್‌ನ ಪಟಾನ್ ಜಿಲ್ಲೆಯ ಆಸ್ಪತ್ರೆಯಲ್ಲಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಬಳಿಕ ಏಳು ರೋಗಿಗಳು ತಮ್ಮ ದೃಷ್ಟಿಯನ್ನು ಕಳೆದುಕೊಂಡಿರುವ ಬಗ್ಗೆ ದೂರು ನೀಡಿದ್ದಾರೆ. ಈ ಕುರಿತು ಪೊಲೀಸರು ತನಿಖೆ ನಡೆಸಲು ಮುಂದಾಗಿದ್ದು, ಸೋಂಕಿನಿಂದಾಗಿ ರೋಗಿಗಳಿಗೆ ಈ ರೀತಿಯ ತೊಂದರೆಗಳು ಉಂಟಾಗಿವೆ ಎಂದು ಆಸ್ಪತ್ರೆ ತಿಳಿಸಿದೆ.

ಫೆಬ್ರವರಿ 2ರಂದು ರಾಧನ್‌ಪುರ ಪಟ್ಟಣದ ಸರ್ವೋದಯ ಕಣ್ಣಿನ ಆಸ್ಪತ್ರೆಯಲ್ಲಿ ಒಟ್ಟು 13 ರೋಗಿಗಳಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಆಸ್ಪತ್ರೆಯ ಟ್ರಸ್ಟಿ ಭಾರತಿ ವಖಾರಿಯಾ, ಏಳು ರೋಗಿಗಳಲ್ಲಿ ಐವರನ್ನು ಅಹಮದಾಬಾದ್ ಸಿವಿಲ್ ಆಸ್ಪತ್ರೆಯ ಎಂ ಮತ್ತು ಜೆ ಇನ್ಸ್ಟಿಟ್ಯೂಟ್ ಆಫ್ ನೇತ್ರಶಾಸ್ತ್ರಕ್ಕೆ ಮತ್ತು ಇಬ್ಬರನ್ನು ಮೆಹ್ಸಾನಾ ಜಿಲ್ಲೆಯ ವಿಸ್ನಗರ ಪಟ್ಟಣದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು ಎಂದು ಹೇಳಿದ್ದಾರೆ.

ಇನ್ನು ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ಋಷಿಕೇಶ್ ಪಟೇಲ್, "ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ತನಿಖೆ ನಡೆಸಲು ಸಮಿತಿಯನ್ನು ರಚಿಸಿದೆ. ನಿರ್ಲಕ್ಷ್ಯ ತೋರಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು" ಎಂದು ಸುದ್ದಿಗಾರರಿಗೆ ತಿಳಿಸಿದರು. ಒಂದು ತಿಂಗಳ ಅವಧಿಯಲ್ಲಿ ರಾಜ್ಯದಲ್ಲಿ ನಡೆದ ಎರಡನೇ ಘಟನೆ ಇದಾಗಿದೆ ಎಂದು ವರದಿಯಾಗಿದೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net