ನಿಯಂತ್ರಣ ತಪ್ಪಿ ಕಮರಿಗೆ ಉರುಳಿದ ಬಸ್​; 7 ಯಾತ್ರಾರ್ಥಿಗಳು ಸಾವು, 25ಕ್ಕೂ ಹೆಚ್ಚು ಮಂದಿ ಗಂಭೀರ

Bus Accident
Published on

ಶ್ರೀನಗರ: ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ​ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ ಏಳು ಮಂದಿ ಮೃತಪಟ್ಟು, 25ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ.

ಅಪಘಾತವು ಜಮ್ಮು ಜಿಲ್ಲೆಯ ಚೋಕಿ ಚೋರಾ ಪ್ರದೇಶದ ತಂಗ್ಲಿ ಮೋರ್​ ಎಂಬ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದ್ದು, ಬಸ್​ ಸುಮಾರು 150 ಅಡಿ ಆಳದ ಕಮರಿಗೆ ಉರುಳಿದ ಪರಿಣಾಮ ದುರ್ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಅಪಘಾತಕ್ಕೀಡಾದ ಬಸ್​ ಹರಿಯಾಣದ ಕುರುಕ್ಷೇತ್ರದಿಂದ ಜಮ್ಮು-ಕಾಶ್ಮೀರದ ರಿಯಾಸಿಯಲ್ಲಿರುವ ಶಿವನ ದೇವಸ್ಥಾನಕ್ಕೆ ತೆರಳುತ್ತಿತ್ತು. ಬಸ್ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿದ ಙರಿಣಾಮ 150 ಅಡಿ ಆಳದ ಕಮರಿಗೆ ಉರುಳಿದೆ. ಘಟನೆಯಲ್ಲಿ ಏಳು ಮಂದಿ ಮೃತಪಟ್ಟಿದ್ದು, 25ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ರೋಗಿಗಳನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net