ಸಾಲ ಬಾಧೆ ತಾಳಲಾರದೆ ಒಂದೇ ಕುಟುಂಬದ 7 ಜನರಿಂದ ವಿಷ ಸೇವನೆ; ಓರ್ವ ಮಹಿಳೆ ಮೃತ, 6 ಜನ ಅಸ್ವಸ್ಥ

ರಾಮನಗರ
Published on

ರಾಮನಗರ: ಸಾಲ ಭಾದೆ ತಾಳಲಾರದೆ ಒಂದೇ ಕುಟುಂಬದ 7 ಜನ ರಾತ್ರಿ ಊಟದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಓರ್ವ ಮಹಿಳೆ ಸಾವನ್ನಪ್ಪಿದ್ದು, ಉಳಿದ 6 ಜನರ ಸ್ಥಿತಿ ಗಂಭೀರವಾಗಿದೆ. ಮಂಗಳಮ್ಮ (28) ಮೃತ ಮಹಿಳೆ. ಮೃತಳ ಪತಿ ರಾಜು, ಮೃತಳ ತಾಯಿ ಸೊಲ್ಲಾಪುರದಮ್ಮ, ಸಹೋದರಿ ಸವಿತಾ, ಮಕ್ಕಳಾದ ಆಕಾಶ್, ಕೃಷ್ಣ, ದರ್ಶಿನಿ ಸ್ಥಿತಿ ಗಂಭೀರವಾಗಿದೆ.

ಈ ಘಟನೆ ರಾಮನಗರ ತಾಲೂಕಿನ ದೊಡ್ಡ ಮಣ್ಣುಗುಡ್ಡೆ ಗ್ರಾಮದಲ್ಲಿ ನಡೆದಿದೆ. ಸದ್ಯ ಬದುಕುಳಿದಿರುವ ಎಲ್ಲರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ರಾಮನಗರ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅಸ್ವಸ್ಥಗೊಂಡಿರುವ 3 ಮಕ್ಕಳು ಸೇರಿದಂತೆ 6 ಮಂದಿಗೆ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲರೂ ಚಿಕಿತ್ಸೆ ಸ್ಪಂದಿಸುತ್ತಿದ್ದು, ಸವಿತಾ ಎಂಬುವರ ಸ್ಥಿತಿ ಗಂಭೀರವಾಗಿದ ಎಂದು ವರದಿಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net