ಮಾಜಿ ಸಿಎಂ ಚಂದ್ರಬಾಬು ನಾಯ್ಡು ರ್‍ಯಾಲಿ ವೇಳೆ ದುರ್ಘಟನೆ; ಕಾಲ್ತುಳಿತಕ್ಕೆ 8 ಜನರು ಸಾವು

64566
Published on

ಆಂಧ್ರ ಪ್ರದೇಶ: ಟಿಡಿಪಿ ರ‍್ಯಾಲಿ ವೇಳೆ ಉಂಟಾದ ಕಾಲ್ತುಳಿತದಿಂದ ಎಂಟು ಜನರು ಸಾವನ್ನಪ್ಪಿರುವಂತಹ ಘಟನೆ ನೆಲ್ಲೂರು ಕ್ಷೇತ್ರದ ವ್ಯಾಪ್ತಿಯ ಕಂದುಕೂರಿನಲ್ಲಿ ನಡೆದಿದೆ.

ಮಾಜಿ ಸಿಎಂ ಚಂದ್ರಬಾಬು ನಾಯ್ಡು ಟಿಡಿಪಿ ಬಹಿರಂಗ ಸಭೆ ಆಯೋಜಿಸಿದ್ದರು. ಈ ವೇಳೆ ವೇದಿಕೆ ಬಳಿ ನೂಕುನುಗ್ಗಲು ಉಂಟಾಗಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಕಾಲ್ತುಳಿತದಿಂದ ಹಲವರಿಗೆ ಗಾಯಗಳಾಗಿದೆ. ಗಾಯಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಘಟನೆ ಕುರಿತಾಗಿ ಮಾಜಿ ಸಿಎಂ ಚಂದ್ರಬಾಬು ಅವರು ದುಃಖ ವ್ಯಕ್ತಪಡಿಸಿದ್ದು, ಸಂತ್ರಸ್ತರ ಪರವಾಗಿದ್ದೇವೆ ಎಂದು ಹೇಳಿದ್ದಾರೆ. ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ನೀಡುವುದಾಗಿ ಚಂದ್ರಬಾಬು ನಾಯ್ಡು ಘೋಷಣೆ ಮಾಡಿದ್ದಾರೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net