ಮುಂದಿನ ಹಂತಕ್ಕೆ ಏಳು ತಂಡಗಳು

Cricket
Published on

ಗೋಣಿಕೊಪ್ಪಲು: ಚೆಕ್ಕೇರ ಒಕ್ಕ, ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ ಹುದಿಕೇರಿ ಜನತಾ ಪ್ರೌಢಶಾಲಾ ಮೈದಾನದಲ್ಲಿ ನಡೆಯುತ್ತಿರುವ ಚೆಕ್ಕೇರ ಕ್ರಿಕೆಟ್ ನಮ್ಮೆಯ ಮಂಗಳವಾರದ ಪಂದ್ಯಾವಳಿಯಲ್ಲಿ 7 ತಂಡಗಳು ಮುನ್ನಡೆ ಪಡೆದುಕೊಂಡಿವೆ.

ಚೆರುವಳಂಡ ಮತ್ತು ಕಲ್ಲೇಂಗಡ ತಂಡಗಳ ನಡುವಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕಲ್ಲೇಂಗಡ ತಂಡ ನಿಗದಿತ 8 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 100ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಕಲ್ಲೇಂಗಡ ತಂಡ 8 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 80 ರನ್ ಗಳಿಸಿ 20 ರನ್‌ಗಳಿಂದ ಸೋಲು ಕಂಡಿತು.

ಬೊಜ್ಜಂಗಡ ಮತ್ತು ಮುಕ್ಕಾಟಿರ ತಂಡಗಳ ನಡುವಿ ಪಂದ್ಯದಲ್ಲಿ ಬೊಜ್ಜಂಗಡ ತಂಡ ನಿಗದಿತ 8 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 105 ರನ್ ಗಳಿಸಿತು. ಮುಕ್ಕಾಟಿರ ತಂಡ 8 ವಿಕೆಟ್ ನಷ್ಟಕ್ಕೆ 39 ರನ್ ಗಳಿಸಿ 66ರನ್‌ಗಳಿಂದ ಸೋಲು ಅನುಭವಿಸಿತು.

ಚಿಯಣಮಾಡ ಮತ್ತು ಬೊಳ್ಳಚೆಟ್ಟಿರ ತಂಡಗಳ ನಡುವಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬೊಳ್ಳಚೆಟ್ಟಿರ ತಂಡ ನಿಗದಿತ 8 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 36ರನ್ ಗಳಿಸಿತು. ಚಿಯಣಮಾಡ ತಂಡ 2.5 ಓವರ್‌ಗಳಲ್ಲಿ ಗುರಿ ತಲುಪಿತು.

ಪೊನ್ನಕಚ್ಚಿರ ಮತ್ತು ಪಾಲಚಂಡ ನಡುವಿನ ಪಂದ್ಯದಲ್ಲಿ ಪಾಲಚಂಡ ನಿಗದಿತ 8 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 105 ರನ್ ಗಳಿಸಿತು. ಪೊನ್ನಕಚ್ಚಿರ ತಂಡ 6 ವಿಕೆಟ್ ನಷ್ಟಕ್ಕೆ 86 ರನ್ ಗಳಿಸಷ್ಟೇ ಶಕ್ತವಾಯಿತು.

ಕಾಯಪಂಡ ಮತ್ತು ಚೆಟ್ಟೆಯಾರಂಡ ನಡುವಿನ ಪಂದ್ಯದಲ್ಲಿ ಚೆಟ್ಟೆಯಾರಂಡ ತಂಡ ನಿಗದಿತ 8 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 92 ರನ್ ಗಳಿಸಿತು. ಕಾಯಪಂಡ ತಂಡ 2 ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.

ಕೊಕ್ಕಲೆಮಾಡ ಮತ್ತು ಬಲ್ಲಣಮಾಡ ತಂಡಗಳ ನಡುವಿನ ಪಂದ್ಯದಲ್ಲಿ ಕೊಕ್ಕಲೆಮಾಡ ತಂಡ ನಿಗದಿತ 8 ಓವರ್‌ಗಳಲ್ಲಿ 5 ವಿಜೆಟ್ ನಷ್ಟಕ್ಕೆ 95 ರನ್ ಗಳಿಸಿತು. ಬಲ್ಲಣಮಾಡ ತಂಡ 3 ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.

ಮಂದೆಯಂಡ ಮತ್ತು ಕಾಳಿಯಿಂಡ ನಡುವಿನ ಪಂದ್ಯದಲ್ಲಿ ಮಂದೆಯಂಡ ತಂಡ ನಿಗದಿತ 8 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 89 ರನ್ ಗಳಿಸಿತು. ಕಾಳಿಯಂಡ ತಂಡ 4 ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net