VIDEO| ವಿಹಿಂಪ ರ್‍ಯಾಲಿ ಮೇಲೆ ಕಲ್ಲು ತೂರಿದ ಕಿಡಿಗೇಡಿಗಳು; ಹಲವರಿಗೆ ಗಂಭೀರ ಗಾಯ

VHP Clash
Published on

ಹರಿಯಾಣ: ವಿಶ್ವ ಹಿಂದೂ ಪರಿಷತ್​ ರ್‍ಯಾಲಿ ಮೇಲೆ ಕೆಲವು ದುಷ್ಕರ್ಮಿಗಳು ಕಲ್ಲು ತೂರಿ, ಗುಂಡು ಹಾರಿಸಿದ ಪರಿಣಾಮ ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹರಿಯಾಣದ ಮೇವಾತ್​ ಎಂಬ ಪ್ರದೇಶದಲ್ಲಿ ನಡೆದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿರುವ ವಿಡಿಯೋದಲ್ಲಿ ಕೆಲವು ಕಿಡಿಗೇಡಿಗಳು ವಿಹಿಂಪ ರ್‍ಯಾಲಿ ಸಾಗುವ ವೇಳೆ ಕಲ್ಲು ತೂರಾಟ ನಡೆಸುತ್ತಿರುವುದು ಕಂಡು ಬಂದಿದೆ. ಇದಾದ ಕೆಲ ಹೊತ್ತಿನ ಬಳಿಕ ಎರಡು ಗುಂಪುಗಳ ನಡುವೆ ಹೊಡೆದಾಟವಾಗಿದ್ದು, ಘರ್ಷಣೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ಹರಿಯಾಣದ ಮೇವಾತ್​ ಎಂಬ ಪ್ರದೇಶದಲ್ಲಿ ಸೋಮವಾರ ವಿಶ್ವ ಹಿಂದೂ ಪರಿಷತ್​ ರ್‍ಯಾಲಿ ನಡೆಯುವ ವೇಳೆ ಕೆಲವು ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಕಲ್ಲು ತೂರಾಟ ನಡೆಸಿ, ಗುಂಡು ಹಾರಿಸುವ ಮೂಲಕ ಶಾಂತಿಗೆ ಭಂಗ ತರಲು ಯತ್ನಿಸಿದ್ದಾರೆ.

ಕಲ್ಲು ತೂರಿರುವ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಎರಡು ಗುಂಪುಗಳ ನಡುವೆ ಘರ್ಷಣೆಯಾಗಿದ್ದು, ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಈ ಸಂಬಂಧ ತನಿಖೆಗೆ ಆದೇಶಿಸಲಾಗಿದ್ದು ತಲೆಮಾರಿಸಿಕೊಂಡಿರುವ ಆರೋಪಿಗಳನ್ನು ಹುಡುಕಲು ತಂಡ ಒಂದನ್ನು ರಚಿಸಲಾಗಿದೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಿ ಮತ್ತಷ್ಟು ಮಾಹಿತಿಯನ್ನು ನೀಡಲಾಗುವುದು ಎಂದು ಘಟನೆ ಕುರಿತು ಹಿರಿಯ ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net