ಹೊತ್ತಿ ಉರಿಯುತ್ತಿದ್ದ ಕಾರ್ಖಾನೆ ಕುಸಿತ: ಕಟ್ಟಡ ಅವಶೇಷಗಳಡಿ ಸಿಲುಕಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಜನರು

Delhi 2 jan 20
Published on

ನವದೆಹಲಿ: ಹೊತ್ತಿ ಉರಿಯುತ್ತಿದ್ದ ಕಾರ್ಖಾನೆಯೊಂದು ಕುಸಿದು ಬಿದ್ದ ಪರಿಣಾಮ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದ ಅಗ್ನಿಶಾಮಕ ಸಿಬ್ಬಂದಿ ಸೇರಿದಂತೆ ಅನೇಕರು ಕಟ್ಟಡ ಅವಶೇಷಗಳಡಿ ಸಿಲುಕಿರುವ ಘಟನೆ ಪಶ್ಚಿಮ ದೆಹಲಿಯ ಪೀರಾಘರ್ಹಿಯಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದೆ.

ಕಾರ್ಖಾನೆಗೆ ಬೆಂಕಿ ತಗುಲಿರುವುದಾಗಿ ಬೆಳಗಿನ ಜಾವ 4.30ಕ್ಕೆ ಅಗ್ನಿಶಾಮಕ ಇಲಾಖೆ ಕರೆ ಸ್ವೀಕರಿಸಿತು. ತಕ್ಷಣ 7 ಅಗ್ನಿಶಾಮಕ ವಾಹನಗಳನ್ನು ಘಟನಾ ಸ್ಥಳಕ್ಕೆ ಕಳುಹಿಸಿಕೊಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾಗ ಬೆಂಕಿ ಜ್ವಾಲೆ ತೀವ್ರಗೊಂದು ಸ್ಫೋಟಿಸಿದ ಪರಿಣಾಮ ಕಟ್ಟಡ ಒಂದು ಭಾಗ ಕುಸಿದಿದೆ. ಈ ವೇಳೆ ಅಗ್ನಿಶಾಮಕ ಸಿಬ್ಬಂದಿ ಸೇರಿದಂತೆ ಅನೇಕರು ಕಟ್ಟಡ ಅವಶೇಷಗಳಡಿ ಸಿಲುಕಿದ್ದಾರೆ.

ಸದ್ಯ ಸ್ಥಳದಲ್ಲಿ 35 ಅಗ್ನಿಶಾಮಕ ವಾಹನಗಳು ಬೀಡುಬಿಟ್ಟಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ. ಅಗ್ನಿಶಾಮಕ ಸಿಬ್ಬಂದಿ ಜತೆ ರಾಷ್ಟ್ರೀಯ ವಿಪತ್ತು ನಿರ್ವಹಣ ತಂಡವೂ ಕೈಜೋಡಿಸಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net