ನಾಯಿಯ ಮೇಲೆ ಲೈಂಗಿಕ ದೌರ್ಜನ್ಯ: 67 ವರ್ಷದ ವ್ಯಕ್ತಿಯ ಬಂಧನ | Dog

dk - 2025-07-02T111834.298
Published on

Dog: ನಾಯಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 67 ವರ್ಷದ ವ್ಯಕ್ತಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯಲ್ಲಿ ನಡೆದಿದೆ.

ಅರ್ವಿ ತಾಲ್ಲೂಕಿನ ಮೌಜಾ ಧನೋಡಿ ಗ್ರಾಮದ ಶಾಲೆಯ ಬಳಿ ಸೋಮವಾರ ಆ ವ್ಯಕ್ತಿ ನಾಯಿಯ ಮೇಲೆ ದೌರ್ಜನ್ಯ ನಡೆಸುತ್ತಿರುವುದು ಕಂಡುಬಂದಿದೆ ಎಂದು ಅಧಿಕಾರಿ ಮಂಗಳವಾರ ತಿಳಿಸಿದ್ದಾರೆ.

ಕೆಲವು ಸ್ಥಳೀಯರು ಪ್ರಾಣಿ ಕಾರ್ಯಕರ್ತರಿಗೆ ಮಾಹಿತಿ ನೀಡಿದ್ದು, ನಂತರ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಮಂಗಳವಾರ ಅರ್ವಿ ಪೊಲೀಸರು ಆ ವ್ಯಕ್ತಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು  ತಿಳಿಸಿದ್ದಾರೆ.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net