ಅನಂತ್-ರಾಧಿಕಾ ಪ್ರೀ-ವೆಡ್ಡಿಂಗ್ ಸಮಾರಂಭ: ಗಾಯಕಿ ಶಕೀರಾ ಪಡೆದ ಸಂಭಾವನೆ ಮೊತ್ತ ಕೇಳಿದ್ರೆ ದಂಗಾಗ್ತೀರಾ!

WhatsApp Image 2024-05-30 at 4.57.41 PM
Published on

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷರಾದ ಮುಖೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ಕೈಗಾರಿಕೋದ್ಯಮಿ ವೀರೇನ್ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ ಅವರ ಅದ್ಧೂರಿ ಮದುವೆ ಸಮಾರಂಭಕ್ಕೆ ಇದೀಗ ಮುಹೂರ್ತ ಫಿಕ್ಸ್​ ಆಗಿದ್ದು, ಹೆಸರಾಂತ ಸೆಲೆಬ್ರಿಟಿಗಳು, ರಾಜಕೀಯ ಗಣ್ಯರು ಆಗಮಿಸಲಿದ್ದಾರೆ ಎಂದು ವರದಿಯಾಗಿದೆ.

ಅನಂತ್​-ರಾಧಿಕಾ ಜೋಡಿಯ ಮದುವೆ ಆಮಂತ್ರಣ ಪತ್ರಿಕೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ದುಬಾರಿ ಮೊತ್ತದ ಮದುವೆಯ ಮಮತೆಯ ಕರೆಯೋಲೆ ನೋಡಿ ನೆಟ್ಟಿಗರು ಆಶ್ಚರ್ಯಚಕಿತರಾಗಿದ್ದಾರೆ. ಜುಲೈ 12ರಂದು ಮುಂಬೈನಲ್ಲಿ ನಡೆಯಲಿರುವ ಅದ್ಧೂರಿ ವಿವಾಹಕ್ಕೆ ಈಗಾಗಲೇ ದಿನಗಣನೆ ಆರಂಭಗೊಂಡಿದೆ. ಇನ್ನು ನಿನ್ನೆಯಿಂದಲೇ ಈ ಜೋಡಿಯ ಪ್ರೀ-ವೆಡ್ಡಿಂಗ್ ಬ್ಯಾಶ್​ ದೊಡ್ಡ ಹಡಗಿನಲ್ಲಿ ನಡೆಯುತ್ತಿದ್ದು, ಖ್ಯಾತ ನಟ-ನಟಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

ವರದಿಗಳ ಪ್ರಕಾರ, ಜಾಗತಿಕ ಮಟ್ಟದಲ್ಲಿ ಸೆನ್ಸೇಷನ್ ಮೂಡಿಸಿರುವ ಗಾಯಕಿ ಶಕೀರಾ ಅವರು ನಾಲ್ಕು ದಿನಗಳ ಕಾಲ ನಡೆಯಲಿರುವ ಅನಂತ್-ರಾಧಿಕಾ ಜೋಡಿಯ ಪ್ರೀ-ವೆಡ್ಡಿಂಗ್ ಬ್ಯಾಶ್​ನಲ್ಲಿ ವಿಶೇಷ ಮನರಂಜನಾ ಕಾರ್ಯಕ್ರಮ ನಡೆಸಿಕೊಡಲಿದ್ದು, ಇದಕ್ಕಾಗಿ ಬರೋಬ್ಬರಿ 10-15 ಕೋಟಿ ರೂ. ಸಂಭಾವನೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಖ್ಯಾತ ಪಾಪ್ ಸಿಂಗರ್ ರಿಹಾನಾ ನಂತರ ಇದೀಗ ಶಕೀರಾ ಈ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net