

ಬೆಂಗಳೂರು:
ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪ್ರಮೋದ್ ಶ್ರೀನಿವಾಸ್ ನೇತೃತ್ವದಲ್ಲಿ ಸಮಿತಿಯ ಸದಸ್ಯರ ಜೊತೆಯಲ್ಲಿ ಬನಶಂಕರಿ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಯ ವಿಜಯೋತ್ಸವ ಆಚರಣೆ ಮಾಡಲಾಯಿತು.
ಸರ್ಕಾರದ ಮಹತ್ವದ ಐದು ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಯೋಜನೆ ಜಾರಿಯಾಗಿ ಎರಡು ವರ್ಷ ಪೂರೈಸಿ 500 ಕೋಟಿ ದಾಖಲೆಯ ಸಂಚಾರ ಮುಟ್ಟಿದ ದಿನದ ಪ್ರಯುಕ್ತ ಬಿಎಂಟಿಸಿ ಬಸ್ ಡ್ರೈವರ್, ಕಂಡಕ್ಟರ್ ಹಾಗೂ ಆಡಳಿತ ಸಿಬ್ಬಂದಿಗೆ ಸಿಹಿ ನೀಡಿ ಸನ್ಮಾನ ಮಾಡಲಾಯಿತು.
ಬನಶಂಕರಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತಿದ ಮಹಿಳಾ ಪ್ರಯಾಣಿಕರಿಗೆ ಬಾಗಿನ ನೀಡಲಾಯಿತು.
ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಆರ್ಥಿಕ ಸ್ವಾತಂತ್ರ್ಯ ಮತ್ತು ಸಾಮಾಜಿಕ ನ್ಯಾಯ ದೊರಕಿದೆ ಎಂದು ಮಹಿಳಾ ಪ್ರಯಾಣಿಕರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಲ್ಲದೆ, ಸರ್ಕಾರಕ್ಕೆ ಧನ್ಯವಾದ ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಉಪ ಮೇಯರ್ ಎಲ್.ಶ್ರೀನಿವಾಸ್, ರಘುನಾಥ್ ನಾಯ್ಡು, ಹಿರಿಯ ಮುಖಂಡರಾದ ಆರ್.ಮುನಿರಾಜು, ಮಾಜಿ ಪಾಲಿಕೆ ಸದಸ್ಯ ಹೆಚ್.ಸುರೇಶ್, ಹೆಚ್.ನಾರಾಯಣ್, ಪದ್ಮನಾಭ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಪಿ.ಪವನ್ ಕುಮಾರ್, ಬನಶಂಕರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೊಹಮದ್ ಅಕ್ಬರ್, ಪದ್ಮನಾಭ ನಗರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರು, ಮಹಿಳಾ ಕಾಂಗ್ರೆಸ್ ಸದಸ್ಯರು, ಯೂತ್ ಕಾಂಗ್ರೆಸ್ ಸದಸ್ಯರು, ಪದ್ಮನಾಭ ನಗರದ ಕಾಂಗ್ರೆಸ್ ಪದಾಧಿಕಾರಿಗಳು ಮತ್ತಿತರರು ಪಾಲ್ಗೊಂಡಿದ್ದರು.