ವೀರಶೈವ-ಲಿಂಗಾಯತರಿಗೆ ಸಿಎಂ ಸ್ಥಾನ ಒತ್ತಾಯಿಸಿ ಖರ್ಗೆಗೆ ಪತ್ರ ಬರೆದ ಶಾಮನೂರು ಶಿವಶಂಕರಪ್ಪ

shamanuru
Published on

ಬೆಂಗಳೂರು/ನವದೆಹಲಿ: ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಹೇಳಲಾಗಿದ್ದ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್​ ಪಕ್ಷವು ಪ್ರಚಂಡ ದಿಗ್ವಿಜಯ ಸಾಧಿಸಿ ಹೊಸ ಸರ್ಕಾರ ರಚಿಸುವ ಹುಮ್ಮಸ್ಸಿನಲ್ಲಿದೆ.

ಇನ್ನು ಕಾಂಗ್ರೆಸ್​ಗೆ ಮುಖ್ಯಮಂತ್ರಿ ಆಯ್ಕೆ ವಿಚಾರ ತಲೆನೋವಾಗಿ ಪರಿಣಮಿಸಿದ್ದು ವರಿಷ್ಠರ ಮೇಲೆ ಸಮುದಾಯವಾರು ಸ್ವಾಮೀಜಿಗಳು ಹಾಗೂ ಮುಖಂಡರು ಒತ್ತಡ ಹೇರ ತೊಡಗಿದ್ದಾರೆ.

ಸಿಎಂ ಬೇಡಿಕೆ ಮುಂದಿಟ್ಟ ವೀರಶೈವ ಮಹಾಸಭಾ

ಇನ್ನು ಈ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪತ್ರ ಬರೆದಿರುವ ಅಖಿಲ ಭಾರತ ವೀರಶೈವ ಮಹಾಸಭಾ ಲಿಂಗಾಯತ ಸಮುದಾಯದ ಒಬ್ಬರನ್ನು ಕಾಂಗ್ರೆಸ್​ ಪಕ್ಷದಿಂದ ಮುಖ್ಯಮಂತ್ರಿ ಮಾಡಬೇಕು ಎಂದು ಆಗ್ರಹಿಸಿ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಪತ್ರ ಬರೆದಿದ್ದಾರೆ.

VL Letter

ಕಾಂಗ್ರೆಸ್​ ಪಕ್ಷದ ಪರ ಲಿಂಗಾಯತ ಸಮುದಾಯವು ಹೆಚ್ಚಿನ ಒಲವು ತೊರಿದೆ ಆದ ಕಾರಣ ಸಮುದಾಯದ ಹಿರಿಯ ಶಾಸಕರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ವೀರಶೈವ ಮಹಾಸಭಾ ಆಗ್ರಹಿಸಿದೆ.

ಶೇ.74% ಸಕ್ಸಸ್ ರೇಟ್

ಹಾಲಿ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಲಿಂಗಾಯತ ಸಮುದಾಯವು ಕಾಂಗ್ರೆಸ್ ಕಡೆಗೆ ಒಲವು ತೋರಿಸಿದೆ. ಇದರಿಂದಾಗಿಯೇ ಪಕ್ಷಕ್ಕೆ ಶೇ.74% ಸಕ್ಸಸ್ ರೇಟ್ ಸಿಕ್ಕಿದಂತಾಗಿದೆ.

ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಪಕ್ಷ ಹೆಚ್ಚಿನ ಸ್ಥಾನ ಗೆಲ್ಲಬೇಕಿದ್ದು ಲಿಂಗಾಯತ ಸಮುದಾಯದವರಿಗೆ ಮುಖ್ಯ ಮಂತ್ರಿ ಸ್ಥಾನ ನೀಡಿ ಎಂದು ಆಗ್ರಹಿಸಿ ಪಕ್ಷದ ಹಿರಿಯ ಶಾಸಕ ಹಾಗೂ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಆಗ್ರಹಿಸಿದ್ಧಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net