

ಕೊಳ್ಳೇಗಾಲ: ಕರ್ನಾಟಕ ಪ್ರದೇಶ ಮೀನುಗಾರರ ಕಾಂಗ್ರೆಸ್ ಸಮಿತಿಯ ರಾಜ್ಯ ಜಂಟಿ ಕಾರ್ಯದರ್ಶಿಯಾಗಿ ತಾಲೂಕಿನ ಮುಳ್ಳೂರು ಗ್ರಾಮದ ಎಲ್. ಶಂಭುಲಿಂಗಸ್ವಾಮಿ ನೇಮಕಗೊಂಡಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಆದೇಶದಂತೆ, ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ಜೆ ವಿಜಯಕುಮಾರ್ ಶಿಫಾರಸ್ಸು ಹಾಗೂ ಅಖಿಲ ಭಾರತ ಮೀನುಗಾರರ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ಅನುಮೋದನೆ ಮೇರೆಗೆ ಎಲ್.ಶಂಭುಲಿಂಗಸ್ವಾಮಿ ಅವರನ್ನು ಕರ್ನಾಟಕ ಪ್ರದೇಶ ಮೀನುಗಾರರ ಕಾಂಗ್ರೆಸ್ ಸಮಿತಿಯ ರಾಜ್ಯ ಜಂಟಿ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.