

ಹಲಗೂರು: ಸಮೀಪದ ಪುರದದೊಡ್ಡಿ ಗ್ರಾಮದ ಶನೇಶ್ವರಸ್ವಾಮಿ ದೇವಾಲಯದಲ್ಲಿ 54ನೇ ವರ್ಷದ ಪೂಜಾ ಮಹೋತ್ಸವ ಕಾರ್ಯಕ್ರಮದ ಪ್ರಯುಕ್ತ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ.
ಶುಕ್ರವಾರ ಸಂಜೆ ಗಣಪತಿ ಹೋಮ, ನವಗ್ರಹ ಶಾಂತಿ ಪೂಜೆ, ಪೂರ್ಣಾಹುತಿಯ ನಂತರ ಶ್ರೀ ಶನೇಶ್ವರ ಸ್ವಾಮಿ ಮತ್ತು ಶ್ರೀ ಅಭಯ ಅಂಜನೇಯಸ್ವಾಮಿಗೆ ಅಭಿಷೇಕ ಮತ್ತು ಮಹಾಮಂಗಳಾರತಿ ನಡೆಯಿತು.
ಶನಿವಾರ (ಜೂ.21) ಬೆಳಗ್ಗೆ 9 ಗಂಟೆಗೆ ಶಿಂಷಾ ನದಿಯಲ್ಲಿ ಶನೇಶ್ವರಸ್ವಾಮಿಗೆ ಹೂ ಹೊಂಬಾಳೆ ಧರಿಸಿ, ಪೂರ್ಣಕುಂಭ, ಬಾಯಿ ಬೀಗ ಸಮೇತ ಮಂಗಳ ವಾದ್ಯಗಳೊಂದಿಗೆ ಸ್ವಾಮಿಯ ಸನ್ನಿಧಿಗೆ ಕರೆ ತರಲಾಗುವುದು. ದೇವಾಲಯದಲ್ಲಿ ಶನೇಶ್ವರ ಸ್ವಾಮಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು, ಮಹಾ ಮಂಗಳಾರತಿ ನಡೆಯಲಿದೆ.
ಮಧ್ಯಾಹ್ನ 12 ಗಂಟೆಗೆ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ. ಸಂಜೆ 7 ಗಂಟೆಗೆ ಶನೇಶ್ವರ ಸ್ವಾಮಿ ಮತ್ತು ಶ್ರೀ ಅಭಯ ಆಂಜನೇಯಸ್ವಾಮಿ ದೇವರ ಉತ್ಸವ ನಡೆಯಲಿದೆ. ಪುರದದೊಡ್ಡಿ, ಬಾಣಸಮುದ್ರ ಮತ್ತು ದಡಮಹಳ್ಳಿ ಸುತ್ತಮುತ್ತಲಿನ ಗ್ರಾಮಗಳ ಭಕ್ತಾದಿಗಳು ಸ್ವಾಮಿಯ ಪೂಜಾ ಕಾರ್ಯಕ್ರಮಕ್ಕೆ ಸಕಾಲಕ್ಕೆ ಆಗಮಿಸಿ ದೇವರ ಕೃಪೆಗೆ ಪಾತ್ರರಾಗಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.