ಶಾರದಾ ಪೀಠದಲ್ಲಿ ಶಂಕರ ಜಯಂತಿ ಸಂಭ್ರಮ

srigeri shankara jayanthi
ಜಗದ್ಗುರು ಶ್ರೀ ಭಾರತೀತೀರ್ಥ ಸ್ವಾಮೀಜಿಗಳು ಶ್ರೀ ಶಂಕರ ಭಗವತ್ಪಾದರ ಸನ್ನಿಧಿಯಲ್ಲಿ ವಿಶೇಷ ಪೂಜೆಯಲ್ಲಿ ಭಾಗಿಯಾದರು.
Published on

ಶೃಂಗೇರಿ: ಶ್ರೀ ಶಂಕರ ಜಯಂತಿ ಪ್ರಯುಕ್ತ ಶಾರದಾ ಪೀಠದಲ್ಲಿ ಹಲವು ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡಿದ್ದು, ಗುರುವಾರ ಬೆಳಗ್ಗೆ ಶ್ರೀ ಶಂಕರಭಗವತ್ಪಾದರ ಮೂರ್ತಿಗೆ ಮಹಾನ್ಯಾಸಪೂರ್ವಕ ಶತರುದ್ರಾಭಿಷೇಕ, ಸಹಸ್ರನಾಮಾರ್ಚನೆ, ಚತುರ್ವೇದ-ಪ್ರಸ್ಥಾನತ್ರಯಭಾಷ್ಯ-ವಿದ್ಯಾರಣ್ಯವೇದಭಾಷ್ಯ-ಶ್ರೀಶಂಕರದಿಗ್ವಿಜಯ ಮೊದಲಾದ ಪಾರಾಯಣಗಳು, ಮಹಾಮಂಗಳಾರತಿ ನೆರವೇರಿದವು. ಸಂಜೆ ಜಗದ್ಗುರು ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ವೇದ ಸ್ವಸ್ತಿವಾಚನ, ಶ್ರೀ ಶಂಕರದಿಗ್ವಿಜಯ ಪಾರಾಯಣ, ವಿದ್ವಾಂಸರಿಂದ ಉಪನ್ಯಾಸ, ಭಗವತ್ಪಾದರ ಮೂರ್ತಿಗೆ ಮಹಾಮಂಗಳಾರತಿ, ಅಷ್ಟಾವಧಾನಸೇವೆ ನಡೆಯಿತು. ಮೇ 12ರಂದು ಶ್ರೀ ಶಾರದಾಪೀಠದಲ್ಲಿ ಶಂಕರ ಜಯಂತಿ ಕಾರ್ಯಕ್ರಮ ನೆರವೇರಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net