ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸಿ

bdvt sdm
ಭದ್ರಾವತಿ ಸರ್ಕಾರಿ ಬಾಲಿಕಾ ಪ್ರೌಢಶಾಲೆಯಲ್ಲಿ ಧರ್ಮಸ್ಥಳ ಯೋಜನೆಯಿಂದ ಏರ್ಪಡಿಸಿದ್ದ ಜ್ಞಾನ ವಿಕಾಸ ಕಾರ್ಯಕ್ರಮವನ್ನು ವಕೀಲ ಎ.ಟಿ.ರವಿ ಉದ್ಘಾಟಿಸಿದರು. ರವೀಂದ್ರ, ಮಂಜುಳಾ ಇತರರಿದ್ದರು.
Published on

ಭದ್ರಾವತಿ: ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಹೊಣೆಗಾರಿಕೆ ಪ್ರತಿಯೊಬ್ಬ ಪಾಲಕರ ಜವಾಬ್ದಾರಿ ಎಂದು ವಕೀಲ ಎ.ಟಿ.ರವಿ ಹೇಳಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಏರ್ಪಡಿಸಿದ್ದ ಜ್ಞಾನ ವಿಕಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜವನ್ನು ಸ್ವಸ್ಥವಾಗಿಡಲು ಹಾಗೂ ಮುಂದಿನ ಆದರ್ಶ ಪ್ರಜೆಗಳಾಗಿ ರೂಪುಗೊಳ್ಳಲು ಮಕ್ಕಳು ಮಾದಕ ವಸ್ತುಗಳಿಂದ ದೂರವಿರಬೇಕು. ಸಂವಿಧಾನದ ಆಶಯಗಳನ್ನು ಅರಿತು, ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದರು.

ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ನೇತ್ರಾವತಿ ಮಾತನಾಡಿ, ಧರ್ಮಸ್ಥಳ ದೇಶದ ಪ್ರಮುಖ ಧಾರ್ಮಿಕ ಕ್ಷೇತ್ರವಾಗಿದ್ದರೂ ಧರ್ಮಭೇದವಿಲ್ಲದೆ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಮದ್ಯವರ್ಜನ ಶಿಬಿರ, ಪರಿಸರ ಜಾಗೃತಿ ಮತ್ತಿತರ ಯೋಜನೆಗಳನ್ನು ಜಾರಿಗೊಳಿಸಿದೆ. ಹಾಗೆಯೇ ಜ್ಞಾನ ವಿಕಾಸ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಸರ್ಕಾರಿ ಬಾಲಿಕಾ ್ರೌಡಶಾಲೆಯ ಶಿಕ್ಷಕರಾದ ರವೀಂದ್ರ, ಮಂಜುಳಾ, ಸೇವಾ ಪ್ರತಿನಿಧಿ ಆರ್.ಮಂಜುಳಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net