ಬೆಂಗಳೂರು:
ಪ್ರತಿಷ್ಠಿತ ಶರಣ ವಿಜಯ ರಾಷ್ಟ್ರೀಯ ಪುರಸ್ಕಾರಕ್ಕೆ ಬೆಂಗಳೂರಿನ ಸುಮಂಗಲಿ ಸೇವಾ ಶ್ರಮದ ಸಂಸ್ಥಾಪಕ ಅಧ್ಯಕ್ಷೆ ಡಾ.ಎಸ್.ಜಿ.ಸುಶೀಲಮ್ಮಅವರು ಆಯ್ಕೆಯಾಗಿದ್ದಾರೆ.
ಅಂತಾರಾಷ್ಟ್ರೀಯ ಲಿಂಗಾಯಿತ ಧರ್ಮ ಕೇಂದ್ರ ಹಾಗೂ ಅಖಿಲ ಭಾರತ ಲಿಂಗವಂತ ಹರಳಯ್ಯ ಪೀಠದ ವತಿಯಿಂದ ನೀಡಲಾಗುವ ಈ ಪ್ರಶಸ್ತಿಯನ್ನು ಬಸವಕಲ್ಯಾಣದಲ್ಲಿ ಅ.15ರಿಂದ ನಡೆಯಲಿರುವ ಶರಣ ವಿಜಯೋತ್ಸವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು ಎಂದು ಆಯ್ಕೆ ಸಮಿತಿ ಅಧ್ಯಕ್ಷ ಹಿರಿಯ ಸಾಹಿತಿ ಡಾ.ಸೋಮನಾಥ ಯಳವಾರ ತಿಳಿಸಿದ್ದಾರೆ.