ದೇಹ ಸುಖದ ಬಳಿಕ ಪ್ರಿಯಕರನಿಗೆ ವಿಷವುಣಿಸಿ ಕೊಂದ ಪ್ರಕರಣ: 2 ವರ್ಷದ ಬಳಿಕ ಆರೋಪಿ ಗ್ರೀಷ್ಮಾಗೆ ಬಿಗ್​ ಶಾಕ್! Sharon raj and Greeshma

Sharon raj and Greeshma
Published on

Sharon raj and Greeshma : ಕೇರಳದಲ್ಲಿ ಭಾರೀ ಕೋಲಾಹಲ ಎಬ್ಬಿಸಿದ್ದ ಶರೋನ್ ರಾಜ್​ ಕೊಲೆ ಪ್ರಕರಣಲ್ಲಿ ಪ್ರಮುಖ ಆರೋಪಿಯಾಗಿರುವ ಗ್ರೀಷ್ಮಾಳಿಗೆ ಬಿಗ್​ ಶಾಕ್​ ಎದುರಾಗಿದೆ. ಜಾಮೀನು ಪಡೆದು ಹೊರಗಡೆ ಆಯಾಗಿದ್ದ ಗ್ರೀಷ್ಮಾಗೆ ಮತ್ತೆ ಜೈಲಿಗೆ ಹೋಗುವ ದಿನಗಳು ಬಂದಿವೆ. ಈ ಪ್ರಕರಣದ ವಿಚಾರಣೆ ನಡೆಸಿದ ತಿರುವನಂತಪುರದ ನೆಯ್ಯಟ್ಟಿಂಕರ ಸೆಷನ್ಸ್ ನ್ಯಾಯಾಲಯ ಆರೋಪಿ ಗ್ರೀಷ್ಮಾ ಮತ್ತು ಆಕೆಯ ಅಂಕಲ್​ನನ್ನು ತಪ್ಪಿತಸ್ಥರು ಎಂದು ತೀರ್ಪು ನೀಡಿದೆ.

ಗ್ರೀಷ್ಮಾಗೆ ಶಿಕ್ಷೆಯ ಪ್ರಮಾಣವನ್ನು ನಾಳೆ ನಿರ್ಧರಿಸಲಾಗುತ್ತದೆ. ಈ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಗ್ರೀಷ್ಮಾಳ ತಾಯಿ ಸಿಂಧು ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಗ್ರೀಷ್ಮಾಳ ಚಿಕ್ಕಪ್ಪ ನಿರ್ಮಲಕುಮಾರನ್ ನಾಯರ್ ಅವರನ್ನು ತಪ್ಪಿತಸ್ಥರೆಂದು ನ್ಯಾಯಾಲಯ ಘೋಷಿಸಿದೆ. ಗ್ರೀಷ್ಮಾ ವಿರುದ್ಧದ ಎಲ್ಲ ಆರೋಪಗಳನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ಸಮರ್ಥವಾಗಿದೆ ಎಂದು ನ್ಯಾಯಾಲಯವು ಕಂಡುಕೊಂಡಿದೆ. ನೆಯ್ಯಟ್ಟಿಂಕರ ಸೆಷನ್ಸ್ ನ್ಯಾಯಾಧೀಶ ಎ.ಎಂ. ಬಶೀರ್ ಅವರು ಈ ಮಹತ್ವದ ತೀರ್ಪು ನೀಡಿದ್ದಾರೆ.

ಎ1 ಆರೋಪಿ ಗ್ರೀಷ್ಮಾ ವಿರುದ್ಧ ಅಪಹರಣ, ವಿಷಪ್ರಾಶನ ಮಾಡಿ ಕೊಲೆ, ತನಿಖಾಧಿಕಾರಿಗಳ ದಾರಿ ತಪ್ಪಿಸುವುದು ಮುಂತಾದ ಅಪರಾಧಗಳು ಸಾಬೀತಾಗಿವೆ. ಐಪಿಸಿ ಸೆಕ್ಷನ್ 302, 328, 364 ಮತ್ತು 201ರ ಅಡಿಯಲ್ಲಿ ಗ್ರೀಷ್ಮಾ ತಪ್ಪಿತಸ್ಥಳೆಂದು ಸಾಬೀತಾಗಿದೆ. ಆದರೆ, ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ನ್ಯಾಯಾಲಯವು ಎರಡನೇ ಆರೋಪಿ ಮತ್ತು ಗ್ರೀಷ್ಮಾಳ ತಾಯಿ ಸಿಂಧು ಅವರನ್ನು ಖುಲಾಸೆಗೊಳಿಸಿತು. ಮೂರನೇ ಆರೋಪಿ, ಆಕೆಯ ಚಿಕ್ಕಪ್ಪನ ವಿರುದ್ಧದ ಸಾಕ್ಷ್ಯಗಳು ಬಲವಾಗಿರುವುದಾಗಿ ನ್ಯಾಯಾಲಯವು ಕಂಡುಕೊಂಡಿದೆ. ಶಿಕ್ಷೆಯ ವಿಚಾರಣೆ ನಾಳೆ ನಡೆಯಲಿದೆ. ನ್ಯಾಯಾಲಯವು 500 ಪುಟಗಳ ತೀರ್ಪನ್ನು ಸಿದ್ಧಪಡಿಸಿದೆ.

ಏನಿದು ಪ್ರಕರಣ?

ಕೇರಳದ ತಿರುವನಂತಪುರದಲ್ಲಿ ಅ.25ರಂದು ರೇಡಿಯೋಲಜಿ ವಿದ್ಯಾರ್ಥಿ ಶರೋನ್ ರಾಜ್ ಮೃತಪಟ್ಟಿದ್ದ. ಆತನ ಪ್ರೇಯಸಿ ಗ್ರೀಷ್ಮಾ ಮೇಲೆ ಅನುಮಾನ ಮೂಡಿ ಪೊಲೀಸರು ಆಕೆಯನ್ನು ವಶಕ್ಕೆ ಪಡೆದುಕೊಂಡಿದ್ದರು. ಸಾಕಷ್ಟು ವಿಚಾರಣೆ ಬಳಿಕ ಅ.31 ರಂದು ಗ್ರೀಷ್ಮಾ, ವಿಷವುಣಿಸಿ ಕೊಲೆ ಮಾಡಿದ್ದಾಗಿ ತಪ್ಪೊಪ್ಪಿಕೊಂಡಳು. ಅ. 14ರಂದು ಶರೋನ್​ ರಾಜ್​ನನ್ನು ತನ್ನ ಮನೆಗೆ ಕರೆಸಿಕೊಂಡ ಗ್ರೀಷ್ಮಾ, ಆಯುರ್ವೇದದ ಔಷಧಿಯಲ್ಲಿ ಕ್ರಿಮಿನಾಶಕವನ್ನು ಬೆರೆಸಿ ಕುಡಿಸಿದ್ದಳು. ಬಳಿಕ ವಿಪರೀತ ವಾಂತಿ ಮಾಡಿಕೊಂಡಿದ್ದ ರಾಜ್​, ತನ್ನ ಸ್ನೇಹಿತನೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಾವು-ಬದುಕಿನ ನಡುವೆ ಹೋರಾಡಿ ಅ.25 ರಂದು ಆತ ಮೃತಪಟ್ಟನು. ಸಂಚು ರೂಪಿಸಿ ಆತನನ್ನು ಗ್ರೀಷ್ಮಾ ಕೊಲೆ ಮಾಡಿದ್ದಾಳೆ.

ಪ್ರಯತ್ನಗಳು ವಿಫಲವಾದ್ದರಿಂದ ಕೊಲೆ

ಗ್ರೀಷ್ಮಾ 2022ರ ಮಾರ್ಚ್ 4ರಂದು ಯೋಧನೊಬ್ಬನ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಳು. ಬಳಿಕ ಶರೂನ್​ ಜತೆ ತನ್ನ ಸಂಬಂಧವನ್ನು ಕಡಿದುಕೊಂಡಿದ್ದಳು. ಆದರೆ, ಮೇ ತಿಂಗಳಲ್ಲಿ ಶರೂನ್​ ಮತ್ತೆ ಗ್ರೀಷ್ಮಾಗೆ ಹತ್ತಿರವಾಗಿದ್ದ.​ ಬಳಿಕ ನವೆಂಬರ್‌ನಲ್ಲಿ ಶರೋನ್ ಅವರ ಮನೆಯಲ್ಲಿ ಮತ್ತು ನಂತರ ವೆಟ್ಟುಕಾಡ್ ಚರ್ಚ್‌ನಲ್ಲಿ ಇಬ್ಬರು ವಿವಾಹವಾದರು. ಇದಾದ ಬಳಿಕ ಥ್ರಿಪ್ಪರಪುವಿನಲ್ಲಿ ರೂಮ್​ ಬುಕ್​ ಮಾಡಿ ಇಬ್ಬರು ಲೈಂಗಿಕ ಕ್ರಿಯೆ ನಡೆಸಿದರು. ಯೋಧನ ಜತೆ ತನ್ನ ಮದುವೆ ದಿನ ಹತ್ತಿರ ಬರುತ್ತಿದ್ದಂತೆ ಶರೂನ್​ನಿಂದ ದೂರಾಗಲು ಗ್ರೀಷ್ಮಾ ಬಯಸಿದಳು. ಲವ್​ ಬ್ರೇಕಪ್​ ಮಾಡಿಕೊಳ್ಳಲು ಸಾಕಷ್ಟು ಮನವೊಲಿಸಿದಳು. ಆದರೆ, ಅದಕ್ಕೆ ಆತ ಒಪ್ಪಲಿಲ್ಲ. ತನ್ನ ಜಾತಕದ ಪ್ರಕಾರ ಮೊದಲ ಪತಿ ಸಾಯುತ್ತಾನೆ ಎಂದು ಹೇಳುವ ಮೂಲಕ ರಾಜ್​ನನ್ನು ಬೆದರಿಸುವ ಪ್ರಯತ್ನ ಮಾಡಿದ್ದಳು. ಆದರೂ ಆತ ಆಕೆಯನ್ನು ಬಿಡಲು ತಯಾರಿರಲಿಲ್ಲ. ತನ್ನೆಲ್ಲ ಪ್ರಯತ್ನಗಳು ವಿಫಲವಾದ್ದರಿಂದ ಅಂತಿಮವಾಗಿ ಕೊಲೆಯನ್ನು ಆಯ್ಕೆ ಮಾಡಿಕೊಂಡಳು ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

ಸೆಕ್ಸ್​ಗಾಗಿ ಒತ್ತಾಯ

2022ರ ಅಕ್ಟೋಬರ್​ 13ರಂದು ಇಬ್ಬರು 1 ಗಂಟೆ 7 ನಿಮಿಷಗಳ ಕಾಲ ಸೆಕ್ಸ್​ ಬಗ್ಗೆ ಮಾತನಾಡಿದ್ದರು. ಸೆಕ್ಸ್​ಗಾಗಿ ಒತ್ತಾಯ ಮಾಡುತ್ತಿದ್ದರಿಂದ ಅಕ್ಟೋಬರ್​ 14ರಂದು ನಾನು ಗ್ರೀಷ್ಮಾ ಮನೆಗೆ ಹೋದೆ ಎಂದು ಶರೂನ್​ ತನ್ನ ಸಂಬಂಧಿಕರ ಮುಂದೆ ಹೇಳಿಕೊಂಡಿದ್ದಾನೆ. ಆಯುರ್ವೇದಿಕ್​ ಔಷಧದಲ್ಲಿ ವಿಷ ಬೆರೆಸಿ ನೀಡಿ ಕೊಲೆ ಮಾಡಿದ್ದಾಳೆ. ಬಳಿಕ ಆತನೊಂದಿಗೆ ನಡೆಸಿದ್ದ ಚಾಟ್​ ಅನ್ನು ಗ್ರೀಷ್ಮಾ ಡಿಲೀಟ್​ ಮಾಡಿದ್ದಾಳೆ. ಅಳಿಸಿದ ಸಂದೇಶಗಳನ್ನು ಹಿಂಪಡೆಯಬಹುದೇ ಎಂದು ನೋಡಲು ಅವಳು ಹಲವಾರು ಬಾರಿ ಗೂಗಲ್ ಮತ್ತು ಯೂಟ್ಯೂಬ್‌ನಲ್ಲಿಯೂ ಹುಡುಕಾಡಿದ್ದಾಳೆ.

ಸಾಯುವ ಕೊನೆಯ ಕ್ಷಣದಲ್ಲಿ ಐಸಿಯು ಬೆಡ್​ನಲ್ಲಿದ್ದ ಶರೋನ್ ರಾಜ್, ನನಗೆ ವಿಷವನ್ನು ನೀಡಿ ವಂಚನೆ ಮಾಡಿದ್ದಾಳೆ ಎಂದು ಸಂಬಂಧಿಕರಿಗೆ ಹೇಳಿದ್ದಾನೆ. ಈ ಎಲ್ಲ ಅಂಶಗಳನ್ನು ಪೊಲೀಸರು ಚಾರ್ಜ್​ಶೀಟ್​ನಲ್ಲಿ ದಾಖಲಿಸಿದ್ದು, ನೆಯ್ಯಟ್ಟಿಂಕರ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು.

ತಿರುವನಂತಪುರಂ ಗ್ರಾಮೀಣ ಎಸ್‌ಪಿ ಡಿ.ಶಿಲ್ಪಾ ಅವರ ನೇತೃತ್ವದಲ್ಲಿ ರಚಿಸಲಾದ ವಿಶೇಷ ತನಿಖಾ ತಂಡವು ಪ್ರಕರಣದ ತನಿಖೆ ನಡೆಸಿತು. ಎಸ್‌ಪಿ ಎಂ.ಕೆ. ಜುಲ್ಫಿಕರ್, ಡಿವೈಎಸ್‌ಪಿಗಳಾದ ಕೆ.ಜೆ. ಜಾನ್ಸನ್, ವಿ.ಟಿ. ರಸಿತ್ ಮತ್ತು ಪಾರಸಲ ಇನ್ಸ್‌ಪೆಕ್ಟರ್ ಸಾಜಿ ತನಿಖೆಯ ನೇತೃತ್ವ ವಹಿಸಿದ್ದರು. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ವಿ.ಎಸ್. ವಿನೀತ್ ಕುಮಾರ್, ಅಲ್ಫಾಸ್ ಮಥಥಿಲ್ ಮತ್ತು ನವನೀತ್ ಕುಮಾರ್ ಪ್ರಾಸಿಕ್ಯೂಷನ್ ಪರವಾಗಿ ಹಾಜರಾದರು. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net