ಕುಂದಾಪುರ ಯುವಕನಿಗಾಗಿ ಜರ್ಮನಿಯಿಂದ ಬಂದಳು; ವಿದೇಶಿ ಪ್ರೀತಿಗೆ ಸ್ವದೇಶಿದಲ್ಲಿ ಹಿಂದೂ ಸಂಪ್ರದಾಯದಂತೆ ಮದುವೆ

She came from Germany for a young man from Kundapura The marriage was conducted as per Hindu tradition
Published on

ಬೆಂಗಳೂರು:  ಪ್ರೀತಿಗೆ ಜಾತಿ, ದೇಶದ ಗಡಿ, ಧರ್ಮಗಳ ಯಾವುದೇ ಗಡಿ ಇಲ್ಲ ಎನ್ನುವುದು ಹಲವು ಬಾರಿ ಸಾಬೀತು ಆಗಿದೆ. ಇದಕ್ಕೆ ಸಾಕ್ಷಿ ಎನ್ನುವಂತೆ ಸೀಮಾ ಹೈದರ್​,  ಅಂಜು ಲವ್​ ಸ್ಟೋರಿಗಳು ದೇಶದ ಗಡಿ ದಾಟಿದ್ದು ನಾವು ಕೇಳಿದ್ದೇವೆ. ಆದರೆ ಇಲ್ಲೊಂದು ಅಪರೋದ ಲವ್​ ಸ್ಟೋರಿ ಭಾರತಕ್ಕೂ ಜರ್ಮನಿಗೂ ಸಂಬಂಧ ಬೆಸೆದಿದೆ.

ಕುಂದಾಪುರ ತಾಲೂಕಿನ ಆಜ್ರಿ ಮೂಲದ ಯುವಕ ಮತ್ತು ಜರ್ಮನಿಯ ಯುವತಿಯ ವಿವಾಹವೂ ಹಿಂದೂ ಸಂಪ್ರದಾಯದಂತೆ ಜ.1ರಂದು ನೆರವೇರಿತು. ಕುಂದಾಪುರ ತಾಲೂಕಿನ ಸಿದ್ದಾಪುರ ಸಮೀಪದ ಚಿತ್ತೇರಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಇವರು ಹಸೆಮಸೆ ಏರಿದ್ದು ಎರಡೂ ಕುಟುಂಬಗಳ ಹಿರಿಯರು ಮದುವೆಗೆ ಸಾಕ್ಷಿಯಾದರು. 

ಕುಂದಾಪುರ ತಾಲೂಕಿನ ಗ್ರಾಮೀಣ ಭಾಗವಾದ ಆಜ್ರಿಯ ಕರಿಮನೆ ಸುವರ್ಣ ಮತ್ತು ಪಂಜು ಪೂಜಾರಿ ದಂಪತಿಯ ಪುತ್ರ ಚಂದನ್ ಹಾಗೂ ಜರ್ಮನಿಯ ಪೆಟ್ರ ಶ್ರೂಆರ್ ಮತ್ತು ಪೀಟರ್ ಶ್ರೂಆರ್ ಮುನಿಸ್ತರ್ ಯುನಿಕಬ್  ದಂಪತಿ ಪುತ್ರಿ ಕಾರಿನ್​​ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನವ ಜೋಡಿ.

ಚಂದನ್ ಅವರು ಜರ್ಮನಿಯಲ್ಲಿ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ಶಿಕ್ಷಕಿಯಾಗಿರುವ ಕಾರಿನ್ ಅವರನ್ನು ಪ್ರೀತಿಸುತ್ತಿದ್ದರು. ಇಬ್ಬರು ತಮ್ಮ ಪ್ರೇಮದ ಬಗ್ಗೆ ತಮ್ಮ ಕುಟುಂಬಿಕರೊಂದಿಗೆ ಮಾತುಕತೆ ಮಾಡಿದ್ದು, ಎರಡು ಕುಟುಂಬಗಳು ಪರಸ್ಪರ ಚರ್ಚಿಸಿ ಮದುವೆಗೆ ಸಮ್ಮತಿಸಿದರು. ಹಿಂದೂ ಸಂಪ್ರದಾಯದಂತೆ ಜ.1ರಂದು  ವಿವಾಹ ನೆರವೇರಿದ್ದು, ಎರಡು ಕಡೆಯ ಬಂಧು -ಮಿತ್ರರು ವಿವಾಹದಲ್ಲಿ ಭಾಗಿಯಾಗಿ ನವ ಜೋಡಿಗೆ ಶುಭಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net