

ಶಿವಮೊಗ್ಗ: ಶಿವಮೊಗ್ಗ ಹೊರವಲಯದ ಸೂಳೆಬೈಲಿನಲ್ಲಿ ಅಕ್ರಮವಾಗಿ ತೆರೆದಿದ್ದ ಕಸಾಯಿ ಖಾನೆಯಲ್ಲಿ 7 ಹಸುಗಳ ಕತ್ತು ಕೊಯ್ದು ಹತ್ಯೆ ಮಾಡಲಾಗಿದೆ.
ಖಚಿತ ಮಾಹಿತಿ ಮೇರೆಗೆ ಶುಕ್ರವಾರ ಬೆಳಗ್ಗೆ 5.30ಕ್ಕೆ ತುಂಗಾನಗರ ಠಾಣೆ ಪಿಐ ಮಂಜುನಾಥ್ ನೇತೃತ್ವದಲ್ಲಿ ಪೊಲೀಸರು ಮತ್ತು ಮಹಾನಗರ ಪಾಲಿಕೆ ಸಿಬ್ಬಂದಿ ದಾಳಿ ಮಾಡಿದ್ದು, ಅಷ್ಟರಲ್ಲಿ 7 ಹಸುಗಳ ಮಾರಣಹೋಮ ನಡೆದಿತ್ತು.
ಸೂಳೆಬೈಲಿನ ಅಜೀಜ್ ಎಂಬುವರ ಮನೆ ಹಿಂಭಾಗದ ಶೆಡ್ನಲ್ಲಿ ಮಾಂಸಕ್ಕಾಗಿ ಗೋವುಗಳನ್ನ ಹತ್ಯೆ ಮಾಡಲಾಗಿದೆ. ಅಕ್ರಮ ಕಸಾಯಿ ಖಾನೆಯಲ್ಲಿದ್ದ ಉಳಿದ 10 ಹಸುಗಳನ್ನ ಪೊಲೀಸರು ರಕ್ಷಣೆ ಮಾಡಿ ಗೋಶಾಲೆಗೆ ಪೊಲೀಸರು ಸ್ಥಳಾಂತರ ಮಾಡಿದ್ದಾರೆ.
ದಾಳಿ ಬೆನ್ನಲ್ಲೇ ಆರೋಪಿಗಳು ಪರಾರಿಯಾಗಿದ್ದಾರೆ. ಅಜೀಜ್, ಬಾಬು, ಅಬ್ದುಲ್ ಸತ್ತರ್ ಹಾಗೂ ಇತರ ಮೂವರ ವಿರುದ್ಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.