ಸ್ವಾತಂತ್ರ್ಯ ಹೋರಾಟಗಾರರಿಗೆ ಜಿಲ್ಲಾಡಳಿತದಿಂದ ಗೌರವ

10 smg 14
Published on

ಶಿವಮೊಗ್ಗ: ಸ್ವಾತಂತ್ರ್ಯದ ಅಮೃತ ಮಹೋತ್ಸವ ನೆನಪಿನಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾದ ಶಿವಮೊಗ್ಗ ಮತ್ತು ಸೊರಬ ತಾಲೂಕಿನ ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ಬುಧವಾರ ಡಿಸಿ ಡಾ. ಆರ್.ಸೆಲ್ವಮಣಿ ಭೇಟಿ ನೀಡಿ ಜಿಲ್ಲಾಡಳಿತದಿಂದ ಫಲಪುಷ್ಪ ನೀಡಿ ಗೌರವಿಸಿದರು.

ಶಿವಮೊಗ್ಗ ತಾಲೂಕಿನ ಸ್ವಾತಂತ್ರ್ಯ ಸೇನಾನಿಗಳಾದ ಬಿ.ಹಾಲೇಶಪ್ಪ, ಕೃಷ್ಣಶೆಟ್ಟಿ, ನಂಜುಂಡಪ್ಪ, ಸಯ್ಯದ್ ಅಬ್ದುಲ್ ಕಲಾಂ ಹಾಗೂ ಸೊರಬ ತಾಲೂಕಿನ ಅಗಸನವಳ್ಳಿಯ ಹೋರಾಟಗಾರ ಗುಡ್ಡಪ್ಪ ಅವರನ್ನು ಭೇಟಿಯಾಗಿ ಅವರ ಯೋಗಕ್ಷೇಮ, ಕುಶಲ ಸಮಾಚಾರ ವಿಚಾರಿಸಿದರು.

ಬಳಿಕ ಮಾತನಾಡಿದ ಡಿಸಿ ಸೆಲ್ವಮಣಿ, ನಾಡಿಗೆ ಸ್ವಾತಂತ್ರ್ಯ ದೊರಕಿಸಿಕೊಡುವಲ್ಲಿ ತಮ್ಮ ಮಾನ-ಪ್ರಾಣ, ಕುಟುಂಬವನ್ನು ಲೆಕ್ಕಿಸದೇ ಹೋರಾಡಿದ ಹಿರಿಯರನ್ನು ಗುರುತಿಸಿ ಗೌರವಿಸಿರುವುದು ವೈಯಕ್ತಿಕವಾಗಿ ಸಂತಸವನ್ನುಂಟು ಮಾಡಿದೆ ಎಂದರು. ಎಸ್ಪಿ ಬಿ.ಎಂ.ಲಕ್ಷ್ಮಿಪ್ರಸಾದ್, ಶಿವಮೊಗ್ಗ ತಹಸೀಲ್ದಾರ್ ಡಾ. ಎನ್.ಜೆ.ನಾಗರಾಜ್, ಸೊರಬ ತಹಸೀಲ್ದಾರ್ ಶೋಭಾಲಕ್ಷ್ಮೀ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net