17ರಂದು ಪದವೀಧರ ಸಹಕಾರ ಸಂಘದ ಸುವರ್ಣ ಮಹೋತ್ಸವ

fa19cab6-3742-4b34-bc21-d106242a8b63
Published on

ಶಿವಮೊಗ್ಗ: ಪದವೀಧರರ ಸಹಕಾರ ಸಂಘದ ಸುವರ್ಣ ಮಹೋತ್ಸವ ಉದ್ಘಾಟನಾ ಸಮಾರಂಭ ಮತ್ತು ಕುವೆಂಪುನಗರದಲ್ಲಿ ನೂತನ ಶಾಖಾ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮ ಸೆ.17ರಂದು ಸಂಜೆ 5.30ಕ್ಕೆ ಸರ್ಜಿ ಕನ್ವೆಕ್ಷನ್ ಹಾಲ್‌ನಲ್ಲಿ ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಎಸ್.ಪಿ.ದಿನೇಶ್ ತಿಳಿಸಿದರು.

ಬೆಕ್ಕಿನ ಕಲ್ಮಠದ ಡಾ. ಶ್ರೀ ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಸ್ವಾಮೀಜಿ ಸುವರ್ಣ ಮಹೋತ್ಸವ ಉದ್ಘಾಟಿಸುವರು. ಬಸವಕೇಂದ್ರದ ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ನೂತನ ಶಾಖಾ ಕಟ್ಟಡದ ಶಿಲಾನ್ಯಾಸ ನೆರವೇರಿಸುವರು. ಗೃಹ ಸಚಿವ ಆರಗ ಜ್ಞಾನೇಂದ್ರ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕ ಕೆ.ಎಸ್.ಈಶ್ವರಪ್ಪ, ಎಂಎಲ್‌ಸಿಗಳಾದ ಆಯನೂರು ಮಂಜುನಾಥ, ಎಸ್.ರುದ್ರೇಗೌಡ, ಮಂಜುನಾಥ ಭಂಡಾರಿ, ಡಿ.ಎಸ್.ಅರುಣ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ಅಧ್ಯಕ್ಷೆ ಕೆ.ಲಲಿತಾ ದೇವೇಗೌಡ, ಸಹಕಾರ ಸಂಘಗಳ ನಿಬಂಧಕ ಕ್ಯಾಪ್ಟನ್ ಡಾ. ರಾಜೇಂದ್ರ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಬಿ.ಚನ್ನವೀರಪ್ಪ, ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಕೆ.ಎಲ್.ಜಗದೀಶ್ವರ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಮತ್ತಿತರರು ಪಾಲ್ಗೊಳ್ಳುವರು ಎಂದರು.

ಸುವರ್ಣ ಮಹೋತ್ಸವಕ್ಕಾಗಿ ಹಲವು ಸಮಿತಿಗಳನ್ನು ರಚಿಸಲಾಗಿದೆ. ಸ್ವಾಗತ ಸಮಿತಿಗೆ ಪಿ.ರುದ್ರಪ್ಪ, ವೇದಿಕೆ ಸಮಿತಿಗೆ ಎಸ್.ಮಮತಾ, ಆಹಾರ ಸಮಿತಿಗೆ ಎಸ್.ರಾಜಶೇಖರ್ ಅಧ್ಯಕ್ಷರಾಗಿದ್ದಾರೆ ಎಂದು ಹೇಳಿದರು. ಸಂಘದ ಉಪಾಧ್ಯಕ್ಷೆ ಎಸ್.ಮಮತಾ, ನಿರ್ದೇಶಕರಾದ ಜೋಗದ ವೀರಪ್ಪ, ಎಚ್.ಸಿ.ಸುರೇಶ್, ಟಿ.ಜಗದೀಶ್, ಡಾ. ಎಸ್.ಎಚ್.ಪ್ರಸನ್ನ, ಯು.ರಮ್ಯಾ, ಡಿ.ಎಸ್.ಭುವನೇಶ್ವರಿ, ಡಾ. ಯು.ಚಂದ್ರಶೇಖರಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net