ಹೆಚ್ಚು ಮತದಾನವಾದ ರಾಜ್ಯದ 2ನೇ ಜಿಲ್ಲೆ ಶಿವಮೊಗ್ಗ

zp
ಜಿಪಂ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಮತದಾನ ಜಾಗೃತಿಗೆ ಸಹಕರಿಸಿದವರ ಅಭಿನಂದನಾ ಕಾರ್ಯಕ್ರಮದಲ್ಲಿ ನವೀದ್ ಅಹ್ಮದ್ ಫರ್ವೇಜ್ ಅವರನ್ನು ಅಭಿನಂದಿಸಲಾಯಿತು. ಸ್ನೇಹಲ್ ಲೋಖಂಡೆ, ಗಾಯತ್ರಿ, ನಿವೇದನ್ ನೆಂಪೆ, ದೀಕ್ಷಿತ್, ರಜತ್ ಇದ್ದರು.
Published on

ಶಿವಮೊಗ್ಗ: ಲೋಕಸಭೆ ಚುನಾವಣೆ ಜಿಲ್ಲೆಯಲ್ಲಿ ಯಶಸ್ವಿಯಾಗಿದೆ. ರಾಜ್ಯದಲ್ಲಿ ಅತಿ ಹೆಚ್ಚಿನ ಪ್ರಮಾಣದ ಮತದಾನವಾದ ಎರಡನೇ ಜಿಲ್ಲೆ ಎಂಬ ಹೆಗ್ಗಳಿಕೆ ನಮ್ಮದಾಗಿದೆ ಎಂದು ಜಿಪಂ ಸಿಇಒ ಸ್ನೇಹಲ್ ಲೋಖಂಡೆ ಹೇಳಿದರು.

ಜಿಪಂ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಮತದಾನ ಜಾಗೃತಿ ಕಾರ್ಯಕ್ರಮಗಳ ಜಿಲ್ಲಾ ಮಟ್ಟದ ವರದಿ ಸಲ್ಲಿಕೆ ಹಾಗೂ ಮತದಾನ ಜಾಗೃತಿಗೆ ಸಹಕರಿಸಿದವರ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅತಿ ದೊಡ್ಡ ಜವಾಬ್ದಾರಿಯೆಂದರೆ ಅದು ಚುನಾವಣೆ ಎಂದು ತಿಳಿಸಿದರು.
ತೀರ್ಥಹಳ್ಳಿ ತಾಪಂ ಕಾರ್ಯನಿರ್ವಹಣಾಧಿಕಾರಿ ಶೈಲಾ ಸ್ವೀಪ್ ಚಟುವಟಿಕೆಗಳ ಕುರಿತು ವರದಿ ಸಲ್ಲಿಸಿದರು. ತೀರ್ಥಹಳ್ಳಿ ತಾಲೂಕಿನ 38 ಗ್ರಾಪಂಗಳಲ್ಲಿ ವಿಶಿಷ್ಟ ರೀತಿಯಲ್ಲಿ ಮತದಾನ ಜಾಗೃತಿ ಹಮ್ಮಿಕೊಳ್ಳಲಾಗಿತ್ತು. ಯಕ್ಷಗಾನ ಕಲಾವಿದರ ಮೂಲಕ ಪಟ್ಟಣದಲ್ಲಿ ವಿವಿಧ ಕಲಾಮೇಳದೊಂದಿಗೆ ಮತದಾನ ಜಾಗೃತಿ ಮಾಡಲಾಗಿತ್ತು ಎಂದರು.
ಶಿವಮೊಗ್ಗ ಲೋಕಸಭಾ ಚುನಾವಣಾ ರಾಯಭಾರಿಗಳಾದ ಡಾ. ಶುಭ್ರತಾ, ನಿವೇದನ್ ನೆಂಪೆ, ಜ್ಯೋತಿ, ರಜತ್, ದೀಕ್ಷಿತ್, ನಾಗರಾಜ ತುಮರಿ, ಜಿಪಂ ಮುಖ್ಯ ಯೋಜನಾಧಿಕಾರಿ ಗಾಯತ್ರಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಶಶಿರೇಖಾ ಇದ್ದರು.
ಮತದಾನ ಜಾಗೃತಿ ಕುರಿತು ಏರ್ಪಡಿಸಿದ್ದ ರಸಪ್ರಶ್ನೆ, ಪ್ರಬಂಧ, ಕಿರುಚಿತ್ರ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು. 2023ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ ಮಟ್ಟದ ಪ್ರಶಸ್ತಿ ಪಡೆದ ಚುನಾವಣಾ ತರಬೇತುದಾರ ನವೀದ್ ಅಹ್ಮದ್ ಫರ್ವೇಜ್ ಹಾಗೂ ಸೊರಬ ತಹಸೀಲ್ದಾರ್ ಹುಸೇನ್ ಅವರನ್ನು ಅಭಿನಂದಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net