ಕಣ್ಮನ ಸೆಳೆದ ಸಾವಿರ ಅಡಿ ಉದ್ದದ ರಾಷ್ಟ್ರಧ್ವಜದ ಜಾಥಾ

WhatsApp Image 2022-08-15 at 1.31.34 PM
Published on

ಶಿವಮೊಗ್ಗ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಜೆಸಿಐ ಶಿವಮೊಗ್ಗ ಮಲ್ನಾಡ್‌ನಿಂದ ಸೋಮವಾರ ನಗರದಲ್ಲಿ ಹಮ್ಮಿಕೊಂಡಿದ್ದ ಒಂದು ಸಾವಿರ ಅಡಿ ಉದ್ದದ ರಾಷ್ಟ್ರಧ್ವಜದೊಂದಿಗಿನ ಜಾಥಾ ಜನರ ಕಣ್ಮನ ಸೆಳೆಯಿತು.

ಸಿಮ್ಸ್ (ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ)ಎದುರು ಆರಂಭಗೊಂಡು ಬಿ.ಎಚ್.ರಸ್ತೆ, ನೆಹರು ರಸ್ತೆ, ಗೋಪಿ ವೃತ್ತ, ಮಹಾವೀರ ವೃತ್ತದ ಮೂಲಕ ಜಾಥಾ ಎನ್‌ಇಎಸ್ ಮೈದಾನ ತಲುಪಿತು. ವಿವಿಧ ಶಾಲೆಗಳ ಸುಮಾರು 800ಕ್ಕೂ ಅಧಿಕ ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.

ಸಿಮ್ಸ್ ಎದುರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಜಾಥಾ ಜಾಥಾಕ್ಕೆ ಚಾಲನೆ ನೀಡಿದರು. ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕರಾದ ಕೆ.ಎಸ್.ಈಶ್ವರಪ್ಪ, ಕೆ.ಬಿ.ಅಶೋಕ ನಾಯ್ಕ, ಎಂಎಲ್‌ಸಿ ಎಸ್.ರುದ್ರೇಗೌಡ, ಡಿ.ಎಸ್.ಅರುಣ್, ಮೇಯರ್ ಸುನೀತಾ ಅಣ್ಣಪ್ಪ, ಜೆಸಿಐ ಶಿವಮೊಗ್ಗ ಮಲ್ನಾಡ್ ಅಧ್ಯಕ್ಷ ಎಸ್.ಪ್ರದೀಪ್, ಸಂಚಾಲಕ ಶ್ರೀನಾಗ್, ಸ್ವಾಮಿನಾಥನ್ ಮತ್ತಿತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net