ಸಹಾಯಧನ ಬಿಡುಗಡೆಗೆ ಎನ್‌ಎಸ್‌ಯುಐ ಪ್ರತಿಭಟನೆ

31 smg 8
Published on

ಶಿವಮೊಗ್ಗ: ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಬಾಕಿ ಇರುವ ಸಹಾಯಧನ ಬಿಡುಗಡೆ ಮಾಡುವಂತೆ ಆಗ್ರಹಿಸಿ ಎನ್‌ಎಸ್‌ಯುಐ ಕಾರ್ಯಕರ್ತರು ಸಮಾಜ ಕಲ್ಯಾಣ ಇಲಾಖೆ ಎದುರು ಶನಿವಾರ ಪ್ರತಿಭಟನೆ ನಡೆಸಿದರು.

ಸಮಾಜ ಕಲ್ಯಾಣ ಇಲಾಖೆ ಮುಖಾಂತರ ಉತ್ತಮ ಫಲಿತಾಂಶ ಪಡೆದು ಪಾಸಾದ ಪಿಯುಸಿ, ಪದವಿ ಮತ್ತು ಸ್ನಾತಕ ಪದವಿ, ವೈದ್ಯಕೀಯ, ತಾಂತ್ರಿಕ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಫ್ರೈಜ್‌ಮನಿ ಹಣವನ್ನು ಜಿಲ್ಲೆಯಲ್ಲಿ ತಡೆಹಿಡಿದಿದ್ದು, ತಕ್ಷಣವೇ ಬಿಡುಗಡೆ ಮಾಡುವಂತೆ ಆಗ್ರಹಿಸಿದರು.

2019-20ನೇ ಸಾಲಿನಲ್ಲಿ ಫ್ರೈಜ್‌ಮನಿ ಯೋಜನೆಯಡಿ 1,600ಕ್ಕೂ ಅಧಿಕ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು. ಆದರೆ, ಇಲಾಖೆ ಇದರಲ್ಲಿ ಶೇ. 50ರಷ್ಟು ವಿದ್ಯಾರ್ಥಿಗಳಿಗೆ ಮಾತ್ರ ಸಹಾಯಧನ ಬಿಡುಗಡೆ ಮಾಡಿದೆ. ಉಳಿದ ವಿದ್ಯಾರ್ಥಿಗಳಿಗೆ ಈವರೆಗೂ ಹಣ ಬಿಡುಗಡೆ ಮಾಡಿಲ್ಲ. ಈ ಯೋಜನೆಯಡಿ ಸರ್ಕಾರ ಅನುದಾನ ಬಿಡುಗಡೆ ಮಾಡಿದ್ದರೂ ಸಮಾಜ ಕಲ್ಯಾಣ ಇಲಾಖೆ ಮಾತ್ರ ಮೀನಾಮೇಷ ಎಣಿಸುತ್ತಿದೆ ಎಂದು ದೂರಿದರು.

ಪಿಯುಸಿ ವಿದ್ಯಾರ್ಥಿಗಳಿಗೆ 20 ಸಾವಿರ ರೂ., ಪದವಿ ವಿದ್ಯಾರ್ಥಿಗಳಿಗೆ 25 ಸಾವಿರ ರೂ., ಸ್ನಾತಕೋತ್ತರ ಕೊರ್ಸ್‌ಗಳಿಗೆ 30 ಸಾವಿರ ರೂ., ಇಂಜಿನಿಯರಿಂಗ್ ಹಾಗೂ ಮೆಡಿಕಲ್ ವಿದ್ಯಾರ್ಥಿಗಳಿಗೆ 35 ಸಾವಿರ ರೂ. ಬಿಡುಗಡೆ ಮಾಡಬೇಕು. ಕರೊನಾದಂತಹ ಸಂಕಷ್ಟದ ಸಂದರ್ಭದಲ್ಲಿ ಈ ಹಣವನ್ನು ಬಿಡುಗಡೆ ಮಾಡಿದರೆ ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿದೆ ಎಂದರು.

ನಗರಾಧ್ಯಕ್ಷ ವಿಜಯ್, ಬಾಲಾಜಿ ಜಿಲ್ಲಾಧ್ಯಕ್ಷ, ರವಿ ಕಾರ್ಯಾಧ್ಯಕ್ಷ, ಅಬ್ದುಲ್ಲಾ, ರವಿ, ಆಲ್ವಿನ್, ಕಿರಣ್, ಚಂದ್ರೋಜಿರಾವ್, ಆಕಾಶ್, ಮಂಜು, ಸಂದೀಪ, ಸಂದೇಶ, ಪ್ರಸನ್ನ, ವಿಕ್ರಂ, ಅಶ್ವಲ್, ಗಿರೀಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net