

ಶಿವಮೊಗ್ಗ: ಜಿಲ್ಲೆಯ ಎಲ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪೊಲೀಸ್ ಅಧಿಕಾರಿ, ಸಿಬ್ಬಂದಿಯ ಕುಂದುಕೊರತೆ ಮತ್ತು ಸೂಕ್ಷ್ಮ ಪ್ರದೇಶಗಳಲ್ಲಿ ಕೆಲಸ ನಿರ್ವಹಿಸುವ ಬಗ್ಗೆ ಮೇಲಧಿಕಾರಿಗಳು ಭಾನುವಾರ ಬ್ರೀಫಿಂಗ್ ನಡೆಸಿದರು.
ಬ್ರೀಫಿಂಗ್‌ನಲ್ಲಿ ಆಯಾ ಠಾಣಾ ವ್ಯಾಪ್ತಿಯ ಠಾಣಾಧಿಕಾರಿಗಳು ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು. ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿ ವಿಕ್ರಂ ಆಮ್ಟೆ ವಿವಿಧೆಡೆ ಬ್ರೀಫಿಂಗ್‌ನಲ್ಲಿ ಭಾಗಿಯಾಗಿ ಸಮಸ್ಯೆಗಳನ್ನು ಆಲಿಸಿದರು.
ಸಾಮಾನ್ಯವಾಗಿ ಪೊಲೀಸ್ ಠಾಣೆ, ಆವರಣಗಳಲ್ಲಿ ಬ್ರೀಫಿಂಗ್ ನಡೆಯುತ್ತಿತ್ತು. ಇದೇ ಮೊದಲ ಬಾರಿಗೆ ಠಾಣೆಯಿಂದ ಹೊರಭಾಗದ ಸಾರ್ವಜನಿಕ ಸ್ಥಳಗಳಲ್ಲಿ ಬ್ರೀಫಿಂಗ್ ನಡೆಸಿದ್ದು, ಜನರಲ್ಲಿ ಕುತೂಹಲ ಮೂಡಿಸಿತ್ತು.