ಶಿವಮೊಗ್ಗ: ನಗರದ ಜೈಲ್ ರಸ್ತೆಯ ಮನೆಯಲ್ಲಿ ಬುಧವಾರ ಬೆಳಗ್ಗೆ ವಿದ್ಯುತ್ ಸ್ಪರ್ಶದಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಸುಮಾ ಮಂಜುನಾಥ (29) ಮೃತರು. ಮನೆಯಲ್ಲಿ ನೀರಿನ ಮೋಟರ್ ಆನ್ ಮಾಡುವ ವೇಳೆ ವಿದ್ಯುತ್ ಶಾಕ್‌ನಿಂದ ಸುಮಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.