ಕರ್ತವ್ಯಲೋಪ ಎಸಗಿದ ವೈದ್ಯ ಸಿಬ್ಬಂದಿ ವಿರುದ್ಧ ಪ್ರತಿಭಟನೆ

jdu
Published on

ಶಿವಮೊಗ್ಗ: ಭದ್ರಾವತಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕರ್ತವ್ಯಕ್ಕೆ ಸರಿಯಾದ ಸಮಯಕ್ಕೆ ಹಾಜರಾಗುತ್ತಿಲ್ಲ. ಇದರಿಂದ ರೋಗಿಗಳಿಗೆ ಸಮಸ್ಯೆಯಾಗಿದೆ. ಕರ್ತವ್ಯಲೋಪವೆಸಗಿದ ಸಿಬ್ಬಂದಿ ವಿರುದ್ಧ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಜೆಡಿಯು ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಗೌಡ ನೇತೃತ್ವದಲ್ಲಿ ಶುಕ್ರವಾರ ಡಿಎಚ್‌ಒ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಜನ್ನಾಪುರ ಹಾಗೂ ಹೊಸಮನೆ ಅಶ್ವತ್ಥ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಮತ್ತು ಸಿಬ್ಬಂದಿ ಬೆಳಗ್ಗೆ 10.30ಕ್ಕೂ ಕೆಲಸಕ್ಕೆ ಬರುವುದಿಲ್ಲ. 9ಕ್ಕೆ ಕರ್ತವ್ಯಕ್ಕೆ ಹಾಜರಾಗಬೇಕೆಂಬ ಸರ್ಕಾರದ ಆದೇಶವನ್ನು ಇವರು ಪಾಲಿಸುತ್ತಿಲ್ಲ. ಇಲ್ಲಿನ ಸಿಬ್ಬಂದಿ ನಮ್ಮಲ್ಲಿ ಅಗತ್ಯ ವೈದ್ಯಕೀಯ ಪರಿಕರಗಳಿಲ್ಲ. ವೈದ್ಯರು ಮೀಟಿಂಗ್‌ಗೆ ತೆರಳಿದ್ದಾರೆ, ತಾಲೂಕು ಆಸ್ಪತ್ರೆಗೆ ಹೋಗಿದ್ದಾರೆ ಎಂದು ಸಬೂಬು ಹೇಳಿ ರೋಗಿಗಳನ್ನು ಬೇರೆ ಆಸ್ಪತ್ರೆಗಳಿಗೆ ಕಳಿಸುತ್ತಾರೆ ಎಂದು ದೂರಿದರು.

ವೈದ್ಯರು, ಸಿಬ್ಬಂದಿ ಕರ್ತವ್ಯಲೋಪದ ಬಗ್ಗೆ ದಾಖಲೆ ಸಮೇತ ತಾಲೂಕು ಆರೋಗ್ಯಾಧಿಕಾರಿಗೆ ಈಗಾಗಲೇ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ವೈದ್ಯಕೀಯ ಪರಿಕರಗಳ ಖರೀದಿಗೆ ಹಣ ಬಿಡುಗಡೆಯಾಗಿದ್ದರೂ ತುಕ್ಕು ಹಿಡಿದ ಹಳೆಯ ಪರಿಕರಗಳಿಂದಲೇ ಚಿಕಿತ್ಸೆ ನೀಡಲಾಗುತ್ತಿದೆ. ಕರ್ತವ್ಯಲೋಪ ತೋರಿದ ಸಿಬ್ಬಂದಿ ಅಮಾನತು ಮಾಡದೇ ಇದ್ದರೆ ಅನಿರ್ಧಿಷ್ಟವಾಧಿ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಸಿದರು.

ಕೆಆರ್‌ಎಸ್ ಕಾರ್ಯಕರ್ತರಾದ ಶರತ್ ಕುಮಾರ್, ತೀರ್ಥ, ತ್ಯಾಗರಾಜ್, ರಾಜೇಂದ್ರ ಪ್ರತಿಭಟನೆಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net