ವಿದ್ಯಾರ್ಥಿಗಳು ಸಂಶೋಧಕರಾಗಲಿ

adc
Published on

ಶಿವಮೊಗ್ಗ: ವಿದ್ಯಾರ್ಥಿಗಳು ಅನ್ವೇಷಣೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಮಾಜಕ್ಕೆ ಉಪಯುಕ್ತ ಕೊಡುಗೆ ನೀಡಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್.ಹೊನ್ನಳ್ಳಿ ತಿಳಿಸಿದರು.

ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಗುರುವಾರ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ರಾಜ್ಯ ಮಟ್ಟದ ವಿಜ್ಞಾನ ವಿಚಾರ ಗೋಷ್ಠಿ ಉದ್ಘಾಟಿಸಿ ಮಾತನಾಡಿದ ಅವರು, ಕೃಷಿ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ವಿಜ್ಞಾನ ಮಹತ್ವದ ಪರಿಣಾಮ ಬೀರುತ್ತಿದೆ. ನಮ್ಮ ಜೀವನದಲ್ಲೂ ವಿಜ್ಞಾನ ಹಾಸುಹೊಕ್ಕಾಗಿದೆ ಎಂದರು.

ನಿರ್ಧಿಷ್ಟ ಗುರಿಯೊಂದಿಗೆ ಆತ್ಮವಿಶ್ವಾಸ ಹಾಗೂ ಛಲದಿಂದ ವಿದ್ಯಾರ್ಥಿಗಳು ಸಂಶೋಧನೆಯಲ್ಲಿ ತೊಡಗಿದರೆ ನಿಜವಗಿಯೂ ಉತ್ತಮ ಫಲಿತಾಂಶ ಸಿಗುತ್ತದೆ. ಇಂತಹ ಮಕ್ಕಳಿಗೆ ಶಿಕ್ಷಕರು ಹಾಗೂ ಪಾಲಕರ ಪ್ರೋತ್ಸಾಹವೂ ದೊರೆಯುತ್ತದೆ ಎಂದು ಹೇಳಿದರು.

ಪ್ರಾಚಾರ್ಯ ಬಸವರಾಜಪ್ಪ, ವಿಶ್ವೇಶ್ವರಯ್ಯ ತಾಂತ್ರಿಕ ವಸ್ತು ಸಂಗ್ರಹಾಲಯದ ಶಿಕ್ಷಣಾಧಿಕಾರಿ ಗೋಪಾಲಕೃಷ್ಣ, ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ ಮುಂತಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net