ಸ್ಮಾರ್ಟ್ ಅಧಿಕಾರಿಗಳ ವಿರುದ್ಧ ಕಿಡಿ

smart
Published on

ಶಿವಮೊಗ್ಗ: ವಿನೋಬ ನಗರದಲ್ಲಿ ಸ್ಮಾರ್ಟ್ ಸಿಟಿಯಿಂದ ನಿರ್ಮಾಣವಾಗುತ್ತಿರುವ ಪಾರ್ಕ್ ಕಾಮಗಾರಿ ವೇಳೆ ಪಾಲಿಕೆಗೆ ಸೇರಿದ ಸ್ವಲ್ಪ ಜಾಗವನ್ನು ಖಾಸಗಿ ವ್ಯಕ್ತಿಗಳಿಗೆ ಬಿಟ್ಟು ಕೊಡಲಾಗಿದೆ ಎಂದು ಆರೋಪಿಸಿ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಬುಧವಾರ ಸ್ಮಾರ್ಟ್ ಸಿಟಿ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಭಗತ್ ಸಿಂಗ್ ಕನ್ನಡ ಯುವಕರ ಸಂಘ, ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ಪ್ರಮುಖರು ಸ್ಮಾರ್ಟ್ ಸಿಟಿ ಅಧಿಕಾರಿಗಳ ವಿರುದ್ಧ ಹರಿಹಾಯ್ದರು. ಒಂದೆಡೆ ಪಾಲಿಕೆ ಆಸ್ತಿಯನ್ನು ಖಾಸಗಿಯವರಿಗೆ ನೀಡುವ ಮೂಲಕ ಆರ್ಥಿಕ ನಷ್ಟ ಉಂಟು ಮಾಡುತ್ತಿದ್ದರೆ ಇನ್ನೊಂದೆಡೆ ಪಾರ್ಕ್‌ಗೆ ಮೀಸಲಿರಿಸಿದ ಜಾಗದ ವಿಸ್ತೀರ್ಣವೂ ಕಡಿಮೆಯಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೀದಿ ಬದಿ ವ್ಯಾಪಾರ ಮಾಡಿಕೊಂಡಿದ್ದವರನ್ನು ತರಕಾರಿ ಮಾರುಕಟ್ಟೆ ಸಂಕೀರ್ಣಕ್ಕೆ ಸ್ಥಳಾಂತರಿಸಲಾಗಿದೆ. ತೆರವು ಮಾಡಿದ ಜಾಗದಲ್ಲಿ ಪಾರ್ಕ್ ನಿರ್ಮಿಸಲಾಗುತ್ತಿದೆ. ವಿವಿಧ ಅಂಗಡಿಗಳ ಮಾಲೀಕರು ಖಾಲಿ ಜಾಗದ ದುರ್ಬಳಕೆ ಮುಂದಾಗಿದ್ದಾರೆ. ಕಟ್ಟಡದಾರರಿಗೆ ಅನುಕೂಲವಾಗುವಂತೆ ಲಕ್ಷಾಂತರ ರೂ. ಮೌಲ್ಯದ ಜಾಗವನ್ನು ಅಧಿಕಾರಿಗಳು ಬಿಟ್ಟುಕೊಟ್ಟಿದ್ದಾರೆ ಎಂದು ದೂರಿದರು.

ಮಾಜಿ ಮೇಯರ್ ಎಚ್.ಪಾಲಾಕ್ಷಿ, ಭಗತ್ ಸಿಂಗ್ ಕನ್ನಡ ಸೇನೆಯ ಎಚ್.ರಾಜಶೇಖರ್, ನಾಗರಿಕ ಹಿತರಕ್ಷಣಾ ವೇದಿಕೆಯ ಕೆ.ವಿ.ವಸಂತ ಕುಮಾರ್, ಮಾಲತೇಶ್, ಶಿವಕುಮಾರ್, ಸುಧಾಕರ ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net