

ಆನಂದಪುರ: ಸಮೀಪದ ಇರುವಕ್ಕಿಯ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿವಿ ಶಿವಮೊಗ್ಗ ಶಾಖೆ ಕೃಷಿ ಕಾಲೇಜಿನ ವಿದ್ಯಾರ್ಥಿಗಳು ಅಂತರ್ ವಿವಿ ಕ್ರೀಡಾಕೂಟದಲ್ಲಿ ಬಹುಮಾನ ಗಳಿಸಿದ್ದಾರೆ.
ಮೂಡಿಗೆರೆಯಲ್ಲಿ ಆಯೋಜಿಸಿದ್ದ ಪಂದ್ಯದಲ್ಲಿ ಪುರುಷರ ವಿಭಾಗದಲ್ಲಿ ವಾಲಿಬಾಲ್ನಲ್ಲಿ ಬಂಗಾರದ ಪದಕ, ಷಟಲ್ ಬ್ಯಾಡ್ಮಿಂಟನ್ನಲ್ಲಿ ಬೆಳ್ಳಿ, ಕಬಡ್ಡಿಯಲ್ಲಿ ಕಂಚು, ಟೇಬಲ್ ಟೆನ್ನಿಸ್ನಲ್ಲಿ ಕಂಚು, ಮಹಿಳೆಯರ ವಿಭಾಗದಲ್ಲಿ ವಾಲಿಬಾಲ್ನಲ್ಲಿ ಬಂಗಾರದ ಪದಕ, ಷಟಲ್ ಬ್ಯಾಡ್ಮಿಂಟನ್ನಲ್ಲಿ ಕಂಚು, ಕಬಡ್ಡಿಯಲ್ಲಿ ಬೆಳ್ಳಿ ಪದಕ ಗಳಿಸಿದ್ದಾರೆ.
ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿದ ವಿವಿ ಕುಲಪತಿ ಡಾ. ಆರ್.ಸಿ.ಜಗದೀಶ್, ಅಧ್ಯಯನದ ಜತೆ ಕ್ರೀಡೆಯಲ್ಲಿ ಸಾಧನೆ ಮಾಡಿರುವುದು ಶ್ಲಾಘನೀಯ. ಸಾಧಕ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಅಗತ್ಯವಿದೆ ಎಂದರು. ವಿದ್ಯಾರ್ಥಿ ಕಲ್ಯಾಣ ನಿರ್ದೇಶಕ ಡಾ. ಸಿ.ಜೆ.ಶ್ರೀಧರ್, ಕೃಷಿ ವಿಭಾಗದ ಡೀನ್ ಡಾ. ತಿಪ್ಪೇಶ್, ಉಪನ್ಯಾಸಕ ಶ್ರೀಧರ್ ಉಪಸ್ಥಿತರಿದ್ದರು.