ತಂಬಾಕು ಸೇವನೆಯಿಂದ ದೂರವಿರಿ

31thyagarthi 1
ತ್ಯಾಗರ್ತಿ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಇಕೋ ಕ್ಲಬ್ ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಸಿಗಳನ್ನು ನೆಡಲಾಯಿತು. ವಿನೋದ್‌ಕುಮಾರ್, ನಟರಾಜ್, ಭಾರತಿ ಇತರರಿದ್ದರು.
Published on

ತ್ಯಾಗರ್ತಿ: ಮಕ್ಕಳು ಆರೋಗ್ಯವಾಗಿರಲು ಜಂಕ್‌ಫುಡ್ ಸೇವನೆ ಹಾಗೂ ದುಶ್ಚಟಗಳಿಂದ ದೂರ ಇರಬೇಕು ಎಂದು ಆರೋಗ್ಯ ಇಲಾಖೆಯ ಆಪ್ತ ಸಮಾಲೋಚಕ ವಿನೋದ್‌ಕುಮಾರ್ ಹೇಳಿದರು.

ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಇಕೋ ಕ್ಲಬ್ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಪರಿಸರ ಜಾಗೃತಿ ಮತ್ತು ಸ್ವಾಸ್ಥೃ ಸಂಕಲ್ಪ ಕಾರ್ಯಕ್ರಮದಲ್ಲಿ ಮಾತನಾಡಿ, ತಂಬಾಕು ಪದಾರ್ಥಗಳ ಸೇವನೆಯಿಂದ ಕ್ಯಾನ್ಸರ್‌ನಂತಹ ಮಾರಕ ಕಾಯಿಲೆಗೆ ತುತ್ತಾಗುವ ಸಾಧ್ಯತೆಯಿದೆ. ಎಲ್ಲರೂ ಪೌಷ್ಟಿಕ ಆಹಾರ ಸೇವಿಸಬೇಕು. ಉತ್ತಮ ಜೀವನಶೈಲಿ ಪಾಲಿಸಬೇಕು ಎಂದು ಸಲಹೆ ನೀಡಿದರು.

ಅರಣ್ಯಾಧಿಕಾರಿ ಮಂಜಪ್ಪ ಮಾತನಾಡಿ, ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕು. ಅರಣ್ಯ ನಾಶದಿಂದ ಪ್ರಕೃತಿ ವಿಕೋಪ, ಅತಿವೃಷ್ಟಿ, ಅನಾವೃಷ್ಟಿ ಸಂಭವಿಸುತ್ತದೆ. ಮಾನವ ಮತ್ತು ವನ್ಯಜೀವಿಗಳ ಸಂಘರ್ಷ ಹೆಚ್ಚಾಗುತ್ತಿದೆ. ಸ್ವಸ್ಥ ಸಮಾಜ, ಪ್ರಾಕೃತಿಕ ಸಮತೋಲನ ಕಾಪಾಡಲು ಅರಣ್ಯ ಸಂರಕ್ಷಣೆ ಅನಿವಾರ್ಯ ಎಂದರು. ಮುಖ್ಯಶಿಕ್ಷಕ ನಟರಾಜ್, ಸಹಶಿಕ್ಷಕ ವಿಜಯಾನಂದ, ಎಸ್‌ಕೆಡಿಆರ್‌ಪಿ ಮೆಲ್ವಿಚಾರಕ ಧರ್ಮಪ್ಪ, ಸೇವಾ ಪ್ರತಿನಿಧಿ ಜಗದೀಶ್, ಭಾರತಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net