ಜೆಡಿಎಸ್​ ತೊರೆದು ಬಿಜೆಪಿ ಸೇರಲು ಸಜ್ಜಾದ ಬಳಿಗಾರ್

baligar
Published on

ಶಿವಮೊಗ್ಗ: ವಿಧಾನಸಭೆ ಚುನಾವಣೆಗೆ ಇನ್ನು ಐದು ತಿಂಗಳು ಇರುವಾಗಲೇ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಬಿಎಸ್‌ವೈ ತವರು ಕ್ಷೇತ್ರದಲ್ಲಿ ಜೆಡಿಎಸ್ ಮುಖಂಡ ಎಚ್.ಟಿ.ಬಳಿಗಾರ್ ಬಿಜೆಪಿ ಸೇರ್ಪಡೆಯಾಗುವುದು ಬಹುತೇಕ ನಿಶ್ಚಿತವಾಗಿದೆ.

2013ರ ವಿಧಾನಸಭೆ ಚುನಾವಣೆಯಲ್ಲಿ ಶಿಕಾರಿಪುರ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಬಳಿಗಾರ್ 15 ಸಾವಿರ ಮತ ಪಡೆದಿದ್ದರು. 2018ರ ಚುನಾವಣೆಯಲ್ಲಿ 13,191 ಮತಗಳು ಲಭಿಸಿದ್ದವು. ಈ ಹಿಂದೆ ಮಾಜಿ ಸಿಎಂ ಎಸ್.ಬಂಗಾರಪ್ಪ ಅವರೊಂದಿಗೆ ಜೆಡಿಎಸ್ ಸೇರ್ಪಡೆಯಾಗಿದ್ದ ಬಳಿಗಾರ್, ಶಿಕಾರಿಪುರ ಕ್ಷೇತ್ರದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು. 2018ರಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಾಗ ನಿಗಮ ಮಂಡಳಿ ಅಧ್ಯಕ್ಷ ಸ್ಥಾನವೂ ಇವರಿಗೆ ಸಿಕ್ಕಿರಲಿಲ್ಲ.

ದಶಕಕ್ಕೂ ಹೆಚ್ಚು ಕಾಲ ಪಕ್ಷಕ್ಕಾಗಿ ದುಡಿದರೂ ನಾಯಕರ ಬೆಂಬಲ ಸಿಗಲಿಲ್ಲ. ಇದೀಗ ಬಿಜೆಪಿ ಬಾಗಿಲು ತೆರೆದಿದ್ದು, 2 ದಿನದ ಹಿಂದಷ್ಟೇ ತರೀಕೆರೆ ಪ್ರವಾಸಿ ಮಂದಿರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿಎಸ್‌ವೈ ಅವರೊಂದಿಗೆ ಬಳಿಗಾರ್ ಚರ್ಚೆ ನಡೆಸಿದ್ದಾರೆ. ಜೆಡಿಎಸ್‌ನಿಂದ ಮಾನಸಿಕವಾಗಿ ದೂರಾಗಿರುವ ಬಳಿಗಾರ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ಒಂದೆರಡು ದಿನಗಳಲ್ಲೇ ಚರ್ಚಿಸಿ ಬಿಜೆಪಿ ಸೇರ್ಪಡೆಯನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net