ಕಲ್ಲುಕ್ವಾರಿ-ಕ್ರಷರ್​ ಮಾಲೀಕರ ಎದೆಯಲ್ಲಿ ಶುರುವಾಯ್ತು ಢವಢವ! ಅಕ್ರಮಕ್ಕೆ ಬ್ರೇಕ್​ ಹಾಕಲು ಸರ್ಕಾರ ಸಜ್ಜು

blast 3
Published on

ಶಿವಮೊಗ್ಗ: ಉಣಸೋಡು ಗ್ರಾಮದ ಕ್ರಷರ್ ಸ್ಫೋಟ ದುರಂತ ಪ್ರಕರಣದ ಬೆನ್ನಲ್ಲೇ ರಾಜ್ಯಾದ್ಯಂತ ಅಕ್ರಮವಾಗಿ ನಡೆಸುತ್ತಿದ್ದ ಕಲ್ಲುಕ್ವಾರಿ ಮತ್ತು ಕ್ರಷರ್​ಗಳ ಮಾಲೀಕರ ಎದೆಯಲ್ಲೀಗ ನಡುಕ ಶುರುವಾಗಿದೆ.

ಉಣಸೋಡು ಗ್ರಾಮದಲ್ಲಿಮ ಸ್ಫೋಟ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಆದೇಶಿಸಿರುವ ಸಿಎಂ ಯಡಿಯೂರಪ್ಪ, ಶಿವಮೊಗ್ಗ ಅಷ್ಟೇ ಅಲ್ಲ, ರಾಜ್ಯಾದ್ಯಂತ ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ತಪ್ಪಿತಸ್ಥರಿಗೆ ಬಚಾವ್​ ಆಗಲು ಅವಕಾಶವೇ ಇಲ್ಲ ಎಂದು ಎಚ್ಚರಿಸಿದ ಬೆನ್ನಲ್ಲೇ, ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಕೂಡ ಇದಕ್ಕೆ ಧ್ವನಿ ಗೂಡಿಸಿದ್ದಾರೆ. ರಾಜ್ಯಾದ್ಯಂತ ಅಕ್ರಮವಾಗಿ ನಡೆಯುತ್ತಿರುವ ಕ್ರಷರ್​ಗಳ ಪತ್ತೆಗೆ ಉನ್ನತ ಮಟ್ಟದ ಸಮಿತಿ ರಚನೆ ಮಾಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿರಿ ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಾಧ್ಯಕ್ಷರ ಎದುರಲ್ಲೇ ನಡೆಯಿತು ಮಾರಾಮಾರಿ!

ಶಿವಮೊಗ್ಗ ತಾಲೂಕಿನ ಹುಣಸೋಡು ಗ್ರಾಮದಲ್ಲಿನ ಕ್ರಷರ್ ಸ್ಫೋಟ ಸ್ಥಳಕ್ಕೆ ಶುಕ್ರವಾರ ಮಧ್ಯಾಹ್ನ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುರುಗೇಶ್ ನಿರಾಣಿ, ಸಿಎಂ ಯಡಿಯೂರಪ್ಪ ಜತೆ ಚರ್ಚಿಸಿ ಯಾರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಬೇಕು ಎಂಬುದನ್ನು ಶೀಘ್ರವೇ ತೀರ್ಮಾನಿಸಲಾಗುವುದು ಎಂದರು. ಇದನ್ನೂ ಓದಿರಿ ಶವಗಳ ಮೇಲೆಯೇ ಓಡಾಡಿದ ಜನ… ಬೆಚ್ಚಿಬೀಳಿಸುತ್ತೆ ಶಿವಮೊಗ್ಗದಲ್ಲಿನ ಸ್ಫೋಟದ ಭೀಕರತೆ

ಉಣಸೋಡು ಗ್ರಾಮದ ಕ್ರಷರ್ ಸ್ಫೋಟಕ್ಕೆ ಸಂಬಂಧಿಸಿದಂತೆ ಸಿಎಂ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ತ್ವರಿತವಾಗಿ ಘಟನೆಗೆ ಕಾರಣ ಹೇಳುವುದು ಕಷ್ಟ. ಹಾಗಾಗಿ ತನಿಖೆ ನಡೆಯುತ್ತಿದ್ದು, ಇದುವರೆಗೂ ಐವರ ಮೃತದೇಹ ಪತ್ತೆಯಾಗಿದೆ. ಒಂದು ಮೃತದೇಹದ ಗುರುತು ಪತ್ತೆ ಸಾಧ್ಯವಾಗಿಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net