ಜೀವ ಉಳಿಸುವ ಶ್ರೇಷ್ಠ ಕಾರ್ಯ ರಕ್ತದಾನ

17 skp 2
ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ಪ್ರಯುಕ್ತ ಶಿಕಾರಿಪುರದಲ್ಲಿ ಬಿಜೆಪಿ ಆಯೋಜಿಸಿದ್ದ ರಕ್ತದಾನ ಶಿಬಿರವನ್ನು ಎಂಎಡಿಬಿ ಮಾಜಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ ಉದ್ಘಾಟಿಸಿದರು. ಹನುಮಂತಪ್ಪ, ಡಿ.ಎಲ್.ಬಸವರಾಜ್, ಸುನಂದಾ, ಗಾಯತ್ರಿ ಇತರರಿದ್ದರು.
Published on

ಶಿಕಾರಿಪುರ: ಭಾರತ ದೇಶ ಸ್ವಂತ ಸಾಮರ್ಥ್ಯದಿಂದ ವಿಶ್ವದಲ್ಲಿ ಬಲಿಷ್ಠವಾಗಲು ಪ್ರಧಾನಿ ನರೇಂದ್ರ ಮೋದಿ ಕಾರಣ ಎಂದು ಎಂಎಡಿಬಿ ಮಾಜಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ಪ್ರಯುಕ್ತ ಬಿಜೆಪಿ ಸೇವಾ ಪಾಕ್ಷಿಕದಡಿ ಮಂಗಳ ಭವನದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಮಾತನಾಡಿ, ಜನಪರ ಕಾರ್ಯಗಳಿಂದ ಪ್ರಧಾನಿ ದೇಶವನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ. ವಿಶ್ವದ ಎಲ್ಲೆಡೆ ಮೋದಿ ನಾಯಕತ್ವಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅವರ ಕಾರ್ಯವೈಖರಿ ಸಾಮಾನ್ಯ ಕಾರ್ಯಕರ್ತನಿಗೂ ಮಾದರಿ ಎಂದು ತಿಳಿಸಿದರು.

ಎಲ್ಲ ದಾನಗಳಿಗಿಂತ ಅತ್ಯಂತ ಶ್ರೇಷ್ಠ ಕಾರ್ಯ ರಕ್ತದಾನ. ಇದರಿಂದ ಇನ್ನೊಬ್ಬರ ಜೀವ ಉಳಿಸಲು ಸಾಧ್ಯವಿದೆ. ಮೋದಿ ಅವರ ಜನ್ಮದಿನದಂದು ಇಂತಹ ಸಾಮಾಜಿಕ ಕಾರ್ಯ ಹಮ್ಮಿಕೊಂಡಿರುವುದು ಶ್ಲಾಘನೀಯ. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಜನಪರ, ರೈತರ, ಹಿಂದುಳಿದವರ ಪರ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.

ತಾಲೂಕು ಅಧ್ಯಕ್ಷ ಸಂಕ್ಲಾಪುರ ಹನುಮಂತಪ್ಪ, ಡಿಸಿಸಿ ಬ್ಯಾಂಕ್ ನಿರ್ದೇಶಕ ಡಿ.ಎಲ್.ಬಸವರಾಜ್, ಪುರಸಭೆ ಅಧ್ಯಕ್ಷೆ ಸುನಂದಾ ಮಂಜುನಾಥ್, ರೈತ ಮೋರ್ಚಾ ತಾಲೂಕು ಅಧ್ಯಕ್ಷ ನಿಂಬೆಗೊಂದಿ ಸಿದ್ಲಿಂಗಪ್ಪ, ಯುವ ಮೋರ್ಚಾ ಅಧ್ಯಕ್ಷ ವೀರನಗೌಡ, ಜಿಲ್ಲಾ ಕಾರ್ಯದರ್ಶಿ ಪ್ರವೀಣ್, ಟಿಎಪಿಸಿಎಂಎಸ್ ಅಧ್ಯಕ್ಷ ಸುಧೀರ್, ವಸಂತ ಗೌಡ, ವೀರೇಶ್, ಲೋಹಿತ್ ನಾಯ್ಕ, ರೇಖಾ ರಾಜಶೇಖರ, ಗಾಯತ್ರಿ ಮಲ್ಲಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net