ಮಾನಸಿಕ ನೆಮ್ಮದಿ ನೀಡುವ ಕೇಂದ್ರ ದೇವಾಲಯ

9sor1
ಸೊರಬ ತಾಲೂಕು ಕಕ್ಕರಸಿ ಗ್ರಾಮದಲ್ಲಿ ಶ್ರೀ ಈಶ್ವರ ಬಸವಣ್ಣ ದೇವಸ್ಥಾನದ ಪ್ರವೇಶೋತ್ಸವ ಕಾರ್ಯಕ್ರಮವನ್ನು ಜಡೆ ಸಂಸ್ಥಾನ ಮಠದ ಶ್ರೀ ಮಹಾಂತ ಸ್ವಾಮೀಜಿ ಉದ್ಘಾಟಿಸಿದರು. ಶ್ರೀ ಘನಬಸವ ಅಮರೇಶ್ವರ ಶಿವಾಚಾರ್ಯ ಸ್ವಾಮೀಜಿ, ಶ್ರೀ ಸಂಗಮೇಶ್ವರ ಶಿವಾಚಾರ್ಯ ಸ್ವಾಮೀಜಿ ಇತರರಿದ್ದರು.
Published on

ಸೊರಬ: ಮನುಷ್ಯನ ಸಂಕಟಗಳನ್ನು ದೂರ ಮಾಡಿ ಮಾನಸಿಕ ನೆಮ್ಮದಿ ಮತ್ತು ಆರೋಗ್ಯವನ್ನು ದೇವಾಲಯಗಳು ನೀಡುತ್ತವೆ ಎಂದು ಜಡೆ ಹಿರೇಮಠದ ಶ್ರೀ ಘನಬಸವ ಅಮರೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ತಾಲೂಕಿನ ಕಕ್ಕರಸಿ ಗ್ರಾಮದಲ್ಲಿ ಶ್ರೀ ಈಶ್ವರ ಬಸವಣ್ಣ ದೇವಸ್ಥಾನದ ಪ್ರವೇಶೋತ್ಸವ, ನೂತನ ಶಿಲಾಮೂರ್ತಿಗಳ ಮರುಪ್ರಾಣ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಮಹೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ಧರ್ಮಸಭೆಯ ಸಾನ್ನಿಧ್ಯವಹಿಸಿ ಆಶೀರ್ವಚನ ನೀಡಿದ ಅವರು, ದೇವಾಲಯಗಳು ಜಾತಿ, ಧರ್ಮ ಭೇದವಿಲ್ಲದಿರುವ ಕೇಂದ್ರಗಳಾಗಿವೆ ಎಂದು ತಿಳಿಸಿದರು.

ಪ್ರತಿಯೊಬ್ಬರೂ ಭಗವಂತನನ್ನು ಸಾಕ್ಷಾತ್ಕಾರ ಮಾಡಿಕೊಳ್ಳಲು ನಂಬಿಕೆ ಹೊಂದಬೇಕು. ನಂಬಿಕೆ ಇಲ್ಲದಿದ್ದರೆ ಭಗವಂತನನ್ನು ಒಲಿಸಿಕೊಳ್ಳಲು ಸಾಧ್ಯವಿಲ್ಲ. ಸಕಲ ಜೀವರಾಶಿಗಳಲ್ಲಿ ಮನುಷ್ಯನೇ ಶ್ರೇಷ್ಠ ಎಂದರು. ಗೊಗ್ಗೆಹಳ್ಳಿ ಸಂಸ್ಥಾನ ಮಠದ ಶ್ರೀ ಸಂಗಮೇಶ್ವರ ಶಿವಾಚಾರ್ಯ ಸ್ವಾಮೀಜಿ, ಜಡೆ ಸಂಸ್ಥಾನ ಮಠದ ಶ್ರೀ ಮಹಾಂತ ಸ್ವಾಮೀಜಿ, ಮಳೆ ಹಿರೇಮಠದ ಶ್ರೀ ಗುರುಬಸವ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಶಾಂತಪುರ ಮಠದ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಪ್ರಮುಖರಾದ ಸದಾಶಿವಪ್ಪ ಗೌಡ, ಮಹೇಶ್ ಪಾಟೀಲ್, ಲಕ್ಷ್ಮಣ, ಚಂದ್ರಶೇಖರ್, ಮಂಜು, ನಂದೀಶ್ ಗೌಡ, ಗುತ್ಯಪ್ಪ, ಮಹೇಶ್ ಪೂಜಾರ್, ಚಂದ್ರಪ್ಪ, ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net