

ಭದ್ರಾವತಿ: ದೇಶವನ್ನು ಸರಿದಾರಿಯಲ್ಲಿ ಕೊಂಡೊಯ್ಯುವ ಸಮರ್ಥ ಸರ್ಕಾರ ರಚನೆ ನಮ್ಮೆಲ್ಲರ ಜವಾಬ್ದಾರಿ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಡಿ.ರಾಘವೇಂದ್ರ ಹೇಳಿದರು.
ತಾಲೂಕು ಆಡಳಿತ, ತಾಲೂಕು ಕಾನೂನು ಸೇವೆಗಳ ಸಮಿತಿಯಿಂದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಡ್ಡಾಯವಾಗಿ ಮತ ಚಲಾಯಿಸುವ ಮೂಲಕ ಸರ್ಕಾರ ರಚನೆಯಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.
ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದ ಪ್ರಧಾನ ಸಿವಿಲ್ ನ್ಯಾಯಾಧೀಶ ವಿ.ರವಿಕುಮಾರ್ ಮಾತನಾಡಿ, ಮತದಾನದ ಮಹತ್ವ ಹಾಗೂ ಜಾಗೃತಿ ಮೂಡಿಸುವುದು ರಾಷ್ಟ್ರೀಯ ಮತದಾರರ ದಿನಾಚರಣೆ ಉದ್ದೇಶ. ಯುವ ಮತದಾರರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದರು.
ತಹಸೀಲ್ದಾರ್ ಪರಸಪ್ಪ ಕುರುಬರ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಸಿದ್ದಬಸಪ್ಪ, ಸಹಾಯಕ ಸರ್ಕಾರಿ ಅಭಿಯೋಜಕ ವಿ.ಪ್ರಸನ್ನ ಕುಮಾರ್, ತಾಪಂ ಅಧಿಕಾರಿ ಉಪೇಂದ್ರ ಬಾಬು, ಉಪತಹಸೀಲ್ದಾರ್ ರಾಜ್ ಅರಸು, ಉಪತಹಸೀಲ್ದಾರ್ ಮಂಜಾನಾಯ್ಕ ಇತರರಿದ್ದರು.